ನವದೆಹಲಿ, ಜೂನ್ 19,ಕೊರೊನಾ ವೈರಸ್ “ಕೋವಿಡ್-19” ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ಎರಡು ಲಕ್ಷಕ್ಕೂ ಹೆಚ್ಚು ಜನರು ರೋಗ ಮುಕ್ತರಾಗಿದ್ದಾರೆ ಮತ್ತು ಕಳೆದ ಎರಡು ದಿನಗಳಿಂದ ದೇಶದಲ್ಲಿ ಈ ಸೋಂಕಿನಿಂದ ಸತ್ತವರ ಸಂಖ್ಯೆಯೂ ಕಡಿಮೆಯಾಗಿದೆ.ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, 13,586 ಹೊಸ ಕೊರೊನಾ ವೈರಸ್ ಪ್ರಕರಣ ಬೆಳಕಿಗೆ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,80,532 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ, 336 ಜನರು ಸಾವನ್ನಪ್ಪಿದ್ದರೆ, ಒಟ್ಟು ಮೃತರ ಸಂಖ್ಯೆ ಈಗ 12,573 ಕ್ಕೆ ಏರಿದೆ. ದೇಶದಲ್ಲಿ ಪ್ರಸ್ತುತ 1,63,248 ಸಕ್ರಿಯ ಕರೋನಾ ಪ್ರಕರಣಗಳಿವೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,386 ಜನರ ಚೇತರಿಸಿಕೊಂಡಿದ್ದು, ರೋಗ ಮುಕ್ತ ಜನರ ಸಂಖ್ಯೆ 2,04,711 ಕ್ಕೆ ಏರಿದೆ.ಕರೋನಾ ಸಾಂಕ್ರಾಮಿಕ ರೋಗದಿಂದ ಹೆಚ್ಚು ಹಾನಿಗೊಳಗಾದ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಕಳೆದ 24 ಗಂಟೆಗಳಲ್ಲಿ 3,752 ಕೊರೊನಾ ವೈರಸ್ ಸೋಂಕಿತರು ಕಾಣಿಸಿಕೊಂಡಿದ್ದು, 100 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,20,504 ಕ್ಕೆ ಮತ್ತು ಸತ್ತವರ ಸಂಖ್ಯೆ 5751 ಕ್ಕೆ ಏರಿದೆ.