ತಾಲೂಕಿನಾದ್ಯಂತ ಸುರಿದ ಜಿಟಿಜಿಟಿ ಮಳೆಗೆ ಬಹುತೇಕ ರಸ್ತೆಗಳು ಹಾಳಾಗಿದ್ದು, ಹಲವೆಡೆ ಅಪಾಯ ಆಹ್ವಾನಿಸುವಂತಿವೆ.
Most of the roads have been damaged by the torrential rains that have poured across the taluk, posin
ಲೋಕದರ್ಶನ ವರದಿ
ಹಾನಗಲ್ 18 :ತಾಲೂಕಿನಾದ್ಯಂತ ಸುರಿದ ಜಿಟಿಜಿಟಿ ಮಳೆಗೆ ಬಹುತೇಕ ರಸ್ತೆಗಳು ಹಾಳಾಗಿದ್ದು, ಹಲವೆಡೆ ಅಪಾಯ ಆಹ್ವಾನಿಸುವಂತಿವೆ. ತಕ್ಷಣ ಗಮನ ಹರಿಸಿ ಲಭ್ಯ ಅನುದಾನದಡಿ ಪ್ಯಾಚ್ ವರ್ಕ್ ಕೈಗೊಂಡು ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.
ಇಲ್ಲಿನ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಅನುದಾನದಡಿ ಹಾನಗಲ್ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪಟ್ಟಿಯನ್ನು ಈಗಾಗಲೇ ಅನುಮೋದಿಸಲಾಗಿದೆ. ಆದಷ್ಟು ಬೇಗ ಅಂದಾಜು ಪತ್ರಿಕೆ ಸಲ್ಲಿಸಿ, ಟೆಂಡರ್ ಹಂತಕ್ಕೆ ತಂದು ಕಾಮಗಾರಿಗಳ ಪ್ರಾರಂಭಕ್ಕೆ ಗಮನ ಹರಿಸಬೇಕು. ಮಳೆಗೆ ರಸ್ತೆಗಳು ಹದಗೆಟ್ಟಿರುವ ಕಾರಣ ವಿಳಂಬ ಮಾಡದೇ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು.ಈಗಾಗಲೇ ಇಲಾಖೆಯಿಂದ ತಾಲೂಕಿನ ಹಲವೆಡೆ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದ್ದು, ಗುಣಮಟ್ಟಕ್ಕೆ ಆದ್ಯತೆ ನೀಡಿ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು.
ತಾಲೂಕಿನಲ್ಲಿ ಹಾಳಾಗಿರುವ ರಸ್ತೆಗಳನ್ನು ಪಟ್ಟಿ ಮಾಡಿ ಅಗತ್ಯ ಅನುದಾನಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಶಾಸಕ ಮಾನೆ ಸೂಚಿಸಿದರು. ಎಇಇ ದೇವರಾಜು ಎಸ್. ಸೇರಿದಂತೆ ಇತರ ಅಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 