ಸಂಸ್ಕೃತಿ ಮತ್ತು ಸಂಸ್ಕಾರ ಮಕ್ಕಳಲ್ಲಿ ಬೆಳುಸುವಲ್ಲಿ ತಾಯಿಯ ಪಾತ್ರ ಹಿರಿದು : ಮಂಗಲಾ ಮೆಟಗುಡ್ಡ
Mother's role is paramount in instilling culture and ethics in children: Mangala Metagudda
ಬೈಲಹೊಂಗಲ 28 : ಕರ್ನಾಟಕ ರಾಜ್ಯ ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹುಬ್ಬಳ್ಳಿ ತಾಲೂಕಾ ಘಟಕ ಬೈಲಹೊಂಗಲದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಬೈಲಹೊಂಗಲದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಕಸಾಪ ಜಿಲ್ಲಾಘಟಕ ಬೆಳಗಾವಿ ಅಧ್ಯಕ್ಷರಾದ ಮಂಗಲಾ ಮೆಟಗುಡ್ಡ ಮಾತನಾಡಿ, ಈಗ ಮಹಿಳೆ ಎಲ್ಲ ರಂಗದಲ್ಲಿ ತನ್ನ ಛಾಪು ಮೂಡಿಸಿದ್ದಾಳೆ. ಹಿಡಿದ ಕೆಲಸವನ್ನು ಸಾಧಿಸುವ ಛಲಗಾತಿ ಎಂದರು. ರಾಜಯೋಗಿನಿ ಬ್ರಮ್ಮಕುಮಾರಿ ಬಿ.ಕೆ. ಪಾರ್ವತಿ ಮಾತನಾಡಿ, ಸಂಸ್ಕೃತಿ ಮತ್ತು ಸಂಸ್ಕಾರ ಮಕ್ಕಳಲ್ಲಿ ಬೆಳುಸುವಲ್ಲಿ ತಾಯಿಯ ಪಾತ್ರ ಹಿರಿದು ಎಂದರು. ಶಿಕ್ಷಕ ವೀರಣ್ಣ ಅಡಕಿ ಮಾತನಾಡಿ, ಕನ್ನಡದ ಮೊದಲ ಕವಿಯತ್ರಿ ಅಕ್ಕಮಹಾದೇವಿ ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು.
ರಾಜ್ಯಾಧ್ಯಕ್ಷರಾದ ಬಿ.ಎ.ಪಾಟೀಲರವರು ಹಿರಿಯ ನಾಗರಿಕರಿಗೆ ಇರುವ ಸೌಲಭ್ಯಗಳ ಬಗ್ಗೆ ವಿವರಿಸಿದರು.ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕಿ ಗೌರಾದೇವಿ ತಾಳಿಕೋಟಿಮಠ ಅಧ್ಯಕ್ಷಸ್ಥಾನ ವಹಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಪುರುಷರ ಸಮಾನವಾಗಿ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾಳೆ ಎಂದರು. ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಡಾ, ಮಹೇಶ್ವರ ಹೊತ್ತಗಿಮಠ ಮಾತನಾಡಿ, ಸಂಘ ಉತ್ತಮ ಕಾರ್ಯ ಚಟುವಟಿಕೆಗಳನ್ನು ಮಾಡಲಿ ಎಂದು ಹಾರೈಸಿದರು.
ಇದೆ ಸಂದರ್ಭದಲ್ಲಿ ಯಾರಡಾಲದ ಅನ್ನಪೂರ್ಣ ಇಂಗಳಗಿ, ದೇವಲಾಪುರದ ಬಸಮ್ಮ ಪಾಟೀಲ ರೈತ ಮಹಿಳೆಯರನ್ನು ಸನ್ಮಾನಿಸಲಾಯಿತು. ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದ ಸಮಾಜ ಸೇವಕಿ ಡಾ, ಸುನಂದಾ ಬೆನ್ನೂರ ಹುಬ್ಬಳ್ಳಿ ಹಾಗೂ ಚೀನಾದಲ್ಲಿ ಎಂಬಿಬಿಎಸ್ ಪದವಿ ಪಡೆದ ಡಾ, ಪೂರ್ಣಿಮಾ ಹೊತ್ತಗಿಮಠ ರವರನ್ನು ಸನ್ಮಾನಿಸಲಾಯಿತು. ಶ್ರೀಮತಿ ಸಾವಿತ್ರಿ ಹೊತ್ತಗಿಮಠ ಪ್ರಸ್ತವಿಕವಾಗಿ ಮಾತನಾಡಿ, ಸಂಘದ ಕಾರ್ಯ ಚಟುವಟಿಕೆಗಳನ್ನು ವಿವರಿಸಿದರು. ಶರಣೆ ದಾನಮ್ಮ ಈಟಿ ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 