ತಾಯಿ, ಮಗಳು ಆತ್ಮಹತ್ಯೆಗೆ ಶರಣು

 ಮೈಸೂರು, ನ. 4:   ಮನೆಯಲ್ಲಿ ನೇಣು ಬಿಗಿದುಕೊಂಡು ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ವಿಜಯನಗರದ ರೈಲ್ವೆ ಬಡಾವಣೆಯಲ್ಲಿ ನಡೆದಿದೆ. ತಾಯಿ ಜಯ (35), ಪುತ್ರಿ ಪ್ರಿಯಾ (11) ಮೃತ ದುದರ್ೆವಿಗಳು. ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ಜಯ ಅವರ ಪತಿ ಸುಧಾಕರ್ ಅವನ್ನು ವಶಕ್ಕೆ ಪಡೆದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.