ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ತಾಯಿ-ಮಗಳ ಪರಾರಿ ಯತ್ನ

ಬೆಂಗಳೂರು, ಮೇ 26, ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ತಾಯಿ-ಮಗಳೊಬ್ಬಳು ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಪರಾರಿಯಾಗಲು ಯತ್ನಿಸಿದ ಘಟನೆ ಇಂದು ನಡೆದಿದೆ.ದೆಹಲಿಯಿಂದ ಬಂದ ವಿಮಾನದಿಂದ ತಾಯಿ ಮಗಳು ಇಳಿದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸಾಕಷ್ಟು ಬಿಗಿ ಭದ್ರತೆ ಒದಗಿಸಲಾಗಿದ್ದು, ಇದರ ನಡುವೆಯೇ ತಾಯಿ ಮಗಳು ಪರಾರಿಯಾಗಲು ಯತ್ನಿಸಿ ಸಿಕ್ಕಿ ಬಿದ್ದಿದ್ದಾರೆ.ಕ್ವಾರೆಂಟೈನ್ ನಿಂದ ತಪ್ಪಿಸಿಕೊಂಡು ಕಾರಿನಲ್ಲಿ ತಪ್ಪಿಸಿಕೊಳ್ಳಲು ತಾಯಿ ಮಗಳು ಮುಂದಾಗಿದ್ದಾರೆ. ಅವರ ಕೈಯಲ್ಲಿ ರೆಡ್ ಝೊನ್ ಎಂಬ ಮುದ್ರೆ ಕೂಡ ಇತ್ತು.
ದೇವನಹಳ್ಳಿ ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಬೆಂಗಳೂರು ನಗರಕ್ಕೆ ಹೋಗಲು ಮುಂದಾಗಿದ್ದಾರೆ. ಸಿ ಎಸ್ ಸಿ ( ಸಾಮಾನ್ಯ ಸೇವಾ ಕೇಂದ್ರ) ತಂಡದಿಂದ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.ತಾಯಿ ಮಗಳನ್ನು ತರಾಟೆಗೆ ತೆಗೆದುಕೊಂಡ ನಂತರ ಕ್ವಾರೆಂಟೈನ್ ಗೆ ಒಪ್ಪಿಗೆ ಸೂಚಿಸಿದರು. ಬಳಿಕ ಅವರನ್ನು ಕ್ವಾರಂಟೈನ್‌ಗೆ ಕಳುಹಿಸಲಾಗಿದೆ. ಅವರಿಬ್ಬರೂ ಕಾರಿನಲ್ಲಿ ಕುಳಿತಿದ್ದರಿಂದ ಕಾರಿಗೆ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ.