ಶ್ರೀ. ನಿಜಶರಣ ಅಂಬಿಗರ ಚೌಡಯ್ಯನವರ ದಿನಾಚರಣೆ ಪೂರ್ವಭಾವಿ ಸಭೆ
ಬೆಳಗಾವಿ, ಜ.9: ನಿಜಶರಣ ಅಂಭಿಗರ ಚೌಡಯ್ಯ ದಿನಾಚರಣೆಯನ್ನು ಫೆ.1 ರಂದು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ (ಜ.9) ಜರುಗಿದ ನಿಜಶರಣ ಅಂಬಿಗರ ಚೌಡಯ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು, ವೇದಿಕೆ, ಆಹ್ವಾನ ಪತ್ರಿಕೆ ಸೇರಿದಂತೆ ಇನ್ನಿತರ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಕುರಿತು ಉಪನ್ಯಾಸ ನೀಡಲು ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು.
ನಗರದ ಕೋಟೆ ಕೆರೆಯಿಂದ ಕುಮಾರ ಗಂಧರ್ವ ರಂಗಮಂದಿರದ ವರೆಗೆ ಜರುಗಲಿರುವ ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳನ್ನು ನಿಯೋಜನೆ, ಮೆರವಣಿಗೆ ಮಾರ್ಗದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ ವಹಿಸಲು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ಸೂಚಿಸಿದರು.
ಸಭೆಯಲ್ಲಿ ಕಾರ್ಯಕ್ರಮದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
ಸಮಾಜದ ಮುಖಂಡರಾದ ದೀಲೀಪ ಕುರುಂದವಾಡೆ ಅವರು ಮಾತನಾಡಿ ಅಂಬಿಗರ ಚೌಡಯ್ಯನವರ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಬೇಕು. ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕಾರ್ಯಕ್ರಮಕ್ಕೂ ಮುನ್ನ ಜರುಗುವ ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳ ನಿಯೋಜನೆ ಮಾಡುವಂತೆ ತಿಳಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ಶುಭಾ ಬಿ, ಉಪ ಆಯುಕ್ತ ಉದಯಕುಮಾರ ತಳವಾರ, ಎಸಿಪಿ ಸದಾಶಿವ ಕಟ್ಟಿಮನಿ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಉಪನಿರ್ದೆಶಕಿ ವಿದ್ಯಾವತಿ ಭಜಂತ್ರಿ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ರಾಹುಲ್ ಕಾಂಬಳೆ ಸಮಾಜದ ಮುಖಂಡರಾದ ಅಶೋಕ ಕಬ್ಬಳಿಗೇರ ಸೇರಿದಂತೆ ಸಮಾಜದ ಗಣ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.