ಅಭಿವೃದ್ದಿ ಕಾಮಗಾರಿ ನಿರ್ಮಾಣಕ್ಕೆ ಮೃಣಾಲ ಹೆಬ್ಬಾಳಕರ್ ಭೂಮಿ ಪೂಜೆ
Mrinala Hebbalkar Bhoomi Puja for construction of development works
ಬೆಳಗಾವಿ, 23 : ಬೆಳಗಾವಿ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಬೆಳವಟ್ಟಿ ಗ್ರಾಮದಲ್ಲಿ ಸುಮಾರು 25 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರು ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಾನೇಶ್ವರ್ ಚೌಗುಲೆ, ಉಪಾಧ್ಯಕ್ಷರಾದ ಮಯಾರಿ ಅರಗೊಡೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹಾದೇವಿ ಪರಶುರಾಮ ಮೆದಾರ್, ಮುಖಂಡರಾದ ಮಧು ನಲವಡೆ, ನಿಶಾ ಚಂದಿಲಕರ್, ರಮೇಶ ಕಾಂಬಳೆ, ರಾಜು ಕಾಂಬಳೆ ಉಪಸ್ಥಿತರಿದ್ದರು. ನಂತರ, ಬೆಳವಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 21.64 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 1 ಹೆಚ್ಚುವರಿ ಕೊಠಡಿಯ ಕಾಮಗಾರಿಗೆ ಸಹ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಲಾಯಿತು.
ಈ ವೇಳೆ ಡಿ.ಡಿ.ಗೊರವ್, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಡಿ.ಎನ್.ಚೌಗುಲೆ, ಉಪಾಧ್ಯಕ್ಷರಾದ ಮಯೂರಿ ಹರಗೊಡೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾದೇವಿ ಮೇದಾರ್,ಉಪಾಧ್ಯಕ್ಷರಾದ ಬಾಬುರಾವ್ ಪಾಟೀಲ, ಮಧು ನಲವಡೆ, ನಾರಾಯಣ ನಲವಡೆ, ಆರಿ್ಬ.ದೇಸಾಯಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 