ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ಮೃಂತುಂಜಯ ಕೊಪ್ಪದ ಆಗ್ರಹ
Mrinthunjaya Koppad's demand to dismiss the state government
ಬ್ಯಾಡಗಿ 07 : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿನ ಲಂಚಗುಳಿತನ ಭ್ರಷ್ಟಾಚಾರ ಹಾಗೂ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರುಗಳಿಗೆ ಬಹಿರಂಗವಾಗಿ ಆರೋಪಿಸುತ್ತಿರುವುದರಿಂದ ರಾಜ್ಯದ ಜನತೆ ಹಿತ ದೃಷ್ಟಿಯಿಂದ ರಾಜ್ಯಪಾಲರು ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕೆಂದು ಜೆಡಿಎಸ್ ಪಕ್ಷದ ಮುಖಂಡ ಮೃತ್ಯುಂಜಯ ಕೊಪ್ಪದ ಆಗ್ರಹಿಸಿದರು.
ಪಟ್ಟಣದ ಹಳೆ ಪುರಸಭೆಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಮುಖ್ಯೆ ರಸ್ತೆಯ ಮೂಲಕ ತಹಶೀಲ್ದಾರ್ ಕಚೇರಿಗೆ ತಲುಪಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ನೀಡುವ ಮೂಲಕ ಮಾತನಾಡಿದವರು.ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನರಿಗೆ ದಕ್ಷ ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚತನ ಭ್ರಷ್ಟಾಚಾರ ಮತ್ತು ಸೃಜನ ಪಕ್ಷಪಾತ ತುಂಬಿ ತುಳುಕುತ್ತಿದೆ ಈ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮತ್ತು ಮುಖಂಡರು ರಾಜ್ಯ ಸರ್ಕಾರದ ಸಚಿವರುಗಳ ವಿರುದ್ಧ ಬಹಿರಂಗವಾಗಿ ಸಾಕ್ಷಿ ಸಮೇತ ದಾಖಲೆಗಳೊಂದಿಗೆ ಮಾಧ್ಯಮಗಳಲ್ಲಿ ನೇರವಾಗಿ ಆರೋಪಿಸುತ್ತಿದ್ದಾರೆ ಇದರಿಂದ ಕರ್ನಾಟಕ ರಾಜ್ಯದ ಮಾನ ಹರಾಜಾಗುತ್ತಿದೆ ಕರ್ನಾಟಕ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿದ್ದು ಯಾವುದೇ ಅಭಿವೃದ್ಧಿಯಾಗುತ್ತಿಲ್ಲ ನಮ್ಮ ಬ್ಯಾಡಗಿ ತಾಲೂಕಿನಲ್ಲಿ ಯಾವುದೇ ಜನಸಾಮಾನ್ಯರ ಹಾಗೂ ರೈತರ ಕೆಲಸಗಳು ಆಗುತ್ತಿಲ್ಲ ಹಾಗೂ ಸಾಮಾನ್ಯ ಜನರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ ಆದ ಕಾರಣ ರಾಜ್ಯ ಸರ್ಕಾರ ದುರಾಡಳಿತದಿಂದ ಅಧಿಕಾರ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬ್ಯಾಡಗಿ ತಾಲೂಕು ಜೆಡಿಎಸ್ ಪಕ್ಷದವರು ಕೂಡಲೇ ರಾಜ್ಯಪಾಲರು ನಮ್ಮ ಮನವಿಗೆ ಸ್ಪಂದಿಸಿ ರಾಜ್ಯ ಸರ್ಕಾರವನ್ನು ವಜಾ ಗೊಳಿಸಬೇಕೆಂದು ಆಗ್ರಹಿಸಿದರು .
ಈ ಸಂದರ್ಭದಲ್ಲಿ ನಾಗರಾಜ ಮತ್ತಳ್ಳಿ.ಅರುಣ ಬಸಲಿಂಘಮ್ಮನವರ.ನಾಗರಾಜ ಹಿತ್ತಲಮನಿ.ಬಿದ್ದಾಡಪ್ಪ ಹಂಸಭಾವಿ.ಈರ್ಪ ಗಜ್ಜರಿ.ಗುಡ್ಡಪ್ಪ ಬಂಡಾರಿ.ನಾಗಪ್ಪ.ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 