ಸೆ. 10 ರಂದು ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ

ಸೆ. 10 ರಂದು  ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ Mudalagi Taluk-level Dasara Sports Meet on September 10

ಲೋಕದರ್ಶನ ವರದಿ 

ಮೂಡಲಗಿ 02 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ 2026-27ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳನ್ನು ಸೆ.10 ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದ್ದು, ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ.10 ರಂದು ಬೆಳಿಗ್ಗೆ 9.00 ಗಂಟೆಗೆ ಹಾಜರಿದ್ದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ ಎಂದು ಯುವ ಸಂಘಟಕ ಸಿದ್ದಣ್ಣ ದುರದುಂಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.