ನಾಳೆ ಶಾಸಕ ಸಿ ಎಸ್ ನಾಡಗೌಡರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಮುದ್ದೇಬಿಹಾಳ ಬಂದ್
Muddebihal bandh tomorrow demanding MLA CS Nadagowda's ministerial berth
ಮುದ್ದೇಬಿಹಾಳ 17: ಮುದ್ದೇಬಿಹಾಳ ಮತಕ್ಷೇತ್ರದ ಶಾಸಕಾದ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರನ್ನು ಈ ಬಾರಿ ಎರಡನೆ ಅವಧಿಯ ಸರಕಾರ ರಚನೆಯ ಮಂತ್ರಿಮಂಡಳದಲ್ಲಿ ಕ್ಯಾಬಿನೇಟ್ ದರ್ಜೆಯ ಸಚಿವಸ್ಥಾನ ನೀಡಬೇಕು ಎಂದು ಆಗ್ರಹಿಸಿ ದಿ. 19ರಂದು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಮುದ್ದೇಬಿಹಾಳ ಒಂದು ದಿನ ಬಂದ ಕರೆ ನೀಡಲಾಗಿದೆ. ಕಾರಣ ಪಟ್ಟಣದ ಎಲ್ಲ ಸಂಘ ಸಂಸ್ಥೆಯ ಮುಖ್ಯಸ್ಥರು ಕಾರ್ಯಕರ್ತರು, ಸಾಹಿತಿಗಳು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು. ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಶಾಸಕ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರ ಗ್ರಹ ಕಚೇರಿಯಲ್ಲಿ ಮಂಗಳವಾರ ಸಂಜೆ ನಡೆದ ವಿವಿದ ಸಂಘ ಸಂಸ್ಥೆಗಳ ಹಾಗೂ ವಿವಿಧ ವ್ಯಾಪಾರಸ್ಥರು ಗಣ್ಯರ ಸಭೆಯಲ್ಲಿ ಅವರು ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 