ಲೋಕದರ್ಶನ ವರದಿ
ಮುದ್ದೇಬಿಹಾಳ 26: ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕು ಅಸಂತಪುರ ಗ್ರಾಮದಲ್ಲಿ ಆ.1 ರಂದು ದಲಿತ ವಿದ್ಯಾಥರ್ಿನಿಯೊಬ್ಬಳನ್ನು ಅಪಹರಿಸಿ, ಅತ್ಯಾಚಾರ ಮಾಡಿ, ಹತ್ಯೆ ಮಾಡಿದ ಘಟನೆ ಖಂಡಿಸಿ, ಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿರುವ ದೇವರ ಹಿಪ್ಪರಗಿ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಮದಲೇ ವಜಾಗೊಳಿಸಬೇಕು ಮತ್ತು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಇಲ್ಲಿನ ವಿವಿಧ ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ಮಾದಿಗ ದಂಡೋರ ಯುವಸೇನೆ ನೇತೃತ್ವದಲ್ಲಿ ಗುರುವಾರ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.
ಅಂಬೇಡ್ಕರ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಹಲಗೆ ಬಾರಿಸುತ್ತ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಸವೇಶ್ವರ ವೃತ್ತದ ಮೂಲಕ ಮಿನಿ ವಿಧಾನಸೌಧಕ್ಕೆ ಆಗಮಿಸಿ ಬಹಿರಂಗ ಸಭೆ ನಡೆಸಿದ ದಲಿತ ಸಂಘಟನೆಗಳ ಮುಖಂಡರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದೂ ಅಲ್ಲದೆ ಪೊಲೀಸರ ಮೇಲೆಯೇ ಸಂಶಯ ವ್ಯಕ್ತಪಡಿಸಿ ಅವರಿಗೆ ಧಿಕ್ಕಾಗಿ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.
ಮುಖ್ಯಮಂತ್ರಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಮತ್ತು ಸಚಿವರಿಗೆ ವಿದ್ಯಾಥರ್ಿನಿಯ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಕೊಡಬೇಕು. ದೇವರ ಹಿಪ್ಪರಗಿ ಠಾಣೆ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕು. ಆರೋಪಿಗಳ ಮೇಲೆ ಕಠಿಣ ಕ್ರಮ ಜರುಗಿಸಿ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಬರೆದಿದ್ದ ಮನವಿ ಪತ್ರವನ್ನು ತಹಸೀಲ್ದಾರ್ ಕಚೇರಿಯ ಶಿರಸ್ತೆದಾರ ಹಿರೇಮಠ ಅವರಿಗೆ ಸಲ್ಲಿಸಲಾಯಿತು.
ಶಿವಪ್ಪ ಮಾದರ, ದೇವೇಂದ್ರ ಹೊಸಮನಿ, ಹಣಮಂತ ಚಲವಾದಿ, ಪರಶು ಕೂಚಬಾಳ, ಯಮನೂರಿ ಬೂದಿಹಾಳ, ತಿಪ್ಪಣ್ಣ ಚಲವಾದಿ, ರಾಮಣ್ಣ ಮಾದರ, ರಾಜು ಚಲವಾದಿ, ಪರಸು ಮಾದರ, ರಾಮು ತಂಬೂರಿ, ಆಕಾಶ ಬ್ಯಾಲ್ಯಾಳ, ಎನ್.ಸಿ.ಬಿದರಕುಂದಿ, ನೀಲಪ್ಪ ಕೋಳೂರ, ಎ.ಎಲ್.ದಾಸರ, ವಿಶ್ವನಾಥ ವನಹಳ್ಳಿ, ಹುಲಗಪ್ಪ ಹಂದ್ರಾಳ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಇದ್ದರು.