ಮುಗಳಖೋಡ: ಯಲ್ಲಾಲಿಂಗ ಮಹಾರಾಜರ 141ನೇ ಜಯಂತ್ಯೋತ್ಸವ ವಿಜೃಂಭಣೆಯಿಂದ ಆಚರಣೆ
Mugalkhod: Yallalinga Maharaja's 141st birth anniversary celebrated with grandeur
ಮುಗಳಖೋಡ 13 : ಸಮೀಪದ ಹಿಡಕಲ್ ಗ್ರಾಮದ ಡಾ. ಸಿದ್ಧೇಶ್ವರ ನಿಲಯದ ಆವರಣದಲ್ಲಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ ರಾಯಬಾಗ ತಾಲೂಕು ಘಟಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ ರಾಯಬಾಗ ತಾಲೂಕು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಭಕ್ತರ ಆರಾಧ್ಯ ಕಾಮಧೇನು ಸದ್ಗುರು ಶ್ರೀ ಯಲ್ಲಾಲಿಂಗ ಮಹಾರಾಜರ 141ನೇ ಜಯಂತ್ಯೋತ್ಸವ ಸಮಾರಂಭವು ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ ರಾಯಬಾಗ ತಾಲೂಕು ಘಟಕದ ಸಂಘಟನಾ ಕಾರ್ಯದರ್ಶಿ ಶರಣ ಜೀವಿಗಳಾದ ಕಲ್ಮೇಶ ಬಿ. ಸತ್ತಿ ಅವರು ಸದ್ಗುರು ಯಲ್ಲಾಲಿಂಗ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ ರಾಯಬಾಗ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸಾಹಿತಿ ಟಿ.ಎಸ್. ಒಂಟಗೂಡಿ ಭಾಗವಹಿಸಿದ್ದರು.
ಅವರು ಮಾತನಾಡಿ, “ಲಚ್ಯಾಣದ ಸಿದ್ಧಲಿಂಗ ಮಹಾರಾಜರ ಕರಕಮಲಗಳಿಂದ ಜನಿಸಿದ ಯಲ್ಲಾಲಿಂಗರು ತಮ್ಮ ಆಶೀರ್ವಾದದ ಮೂಲಕ ಭಕ್ತರ ಅಜ್ಞಾನ ಅಂಧಕಾರವನ್ನು ದೂರ ಮಾಡಿ ಸುಜ್ಞಾನದ ಬೆಳಕನ್ನು ಮೂಡಿಸಿದ ಮಹಾನ್ ಸಂತರು. ಏಳು ಕೋಟಿ ಶಿವನಾಮ ಜಪದ ಮೂಲಕ ಸ್ಮಶಾನವನ್ನು ಸುಕ್ಷೇತ್ರವನ್ನಾಗಿ ಪರಿವರ್ತಿಸಿದ ಸತ್ಕೀರ್ತಿಗೆ ಪಾತ್ರರಾದ ಸದ್ಗುರು ಯಲ್ಲಾಲಿಂಗ ಮಹಾರಾಜರು ಭಕ್ತರಿಗೆ ಭಕ್ತಿಯ ದಿವ್ಯ ಸಂದೇಶ ಸಾರಿದರು” ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ರೈತ ಅಶೋಕ ಪೂಜಾರಿ ವಹಿಸಿದ್ದರು. ವೇದಿಕೆಯಲ್ಲಿ ಒಂಟಗೂಡಿ ಕುಟುಂಬದ ಅಮಿತ್ ಪೂಜಾರಿ, ಚಿಬ್ಬವ್ವ ಒಂಟಗೂಡಿ, ಯಮನವ್ವ ಪೂಜಾರಿ, ಗೌರವ್ವ ಒಂಟಗೂಡಿ, ಮೀನಾಕ್ಷಿ ಒಂಟಗೂಡಿ, ಇಂದ್ರವ್ವ ಒಂಟಗೂಡಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಾಮು ಒಂಟಗೂಡಿ ಸ್ವಾಗತಿಸಿ ನಿರೂಪಿಸಿದರು. ಲಕ್ಷ್ಮಿ ಪೂಜಾರಿ ವಂದಿಸಿದರು.
ಆಗಸ್ಟ್ 6ರ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನದ ಬಾಲೋತ್ರಾ-ಜೋಧ್ಪುರ ಹೆದ್ದಾರಿಯಲ್ಲಿ ಎಸ್ಯುವಿ-ಡಂಪರ್ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ 