ನಾನಾ ಭಾಷಾ ವಸ್ತು ಪ್ರದರ್ಶನ
Multilingual exhibition
ವಿಜಯಪುರ 05: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ, ಸಮಾಜ, ಗಣಿತ ಸೇರಿದಂತೆ ನಾನಾ ಭಾಷಾ ವಸ್ತು ಪ್ರದರ್ಶನ ಮಂಗಳವಾರ ನಡೆಯಿತು.
ಬಸವನ ಬಾಗೇವಾಡಿಯ ಸಿಡಿಪಿಓ ಶಿಲ್ಪಾ ಎಸ್. ಹಿರೇಮಠ ಮತ್ತು ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಪಿ. ಮಂಜುನಾಥ ಪಿ. ಕಾರ್ಯಕ್ರಮ ಉದ್ಘಾಟಿಸಿದರು.
ಸಂಸ್ಥೆಯ ಮುಖ್ಯ ಸಲಹೆಗಾರ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಶೈಜೂ ನಾಯರ, ಹಿರಿಯ ಕಾರ್ಯ ಸಂಯೋಜಕ ದೀಪಾ ಜಂಬೂರೆ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮುಂತಾದವರು ಉಪಸ್ಥಿತರಿದ್ದರು.
ನಾನಾ ಮಾದರಿಗಳನ್ನು ವೀಕ್ಷಿಸಿದ ಗಣ್ಯರು, ಮಕ್ಕಳೊಂದಿಗೆ ಆ ಮಾದಿರಗಳ ಪ್ರಯೋಜನ ಮತ್ತೀತರ ವಿಷಯಗಳ ಕುರಿತು ಮಾಹಿತಿ ಪಡೆದರು. ಆಂಗ್ಲಭಾಷೆಯ ಸಂಗೀತ ಅನುವಾದ ಮಾದರಿ, ಹಿಂದಿಭಾಷೆಯ ವ್ಯಾಕರಣಕ್ಕೆ ಸಂಬಂಧಿಸಿದ ಮಾದರಿಗಳು ಗಮನ ಸೆಳೆದವು.
ಮಕ್ಕಳು ನಡೆಸಿಕೊಟ್ಟ ಕನ್ನಡ ಭಾಷೆಯ ಅನುಭವ ಮಂಟಪದ ಶರಣರ ವಚನಗೋಷ್ಠಿ ಹಾಗೂ ಜನಪದ ಕಲಾವೈಭವ ಯಕ್ಷಗಾನ, ಕಂಸಾಳೆ, ವೀರಗಾಸೆಗಳು ಪ್ರದರ್ಶನಗಳು ನೆರೆದ ಜನಮನ ಸೂರೆಗೊಂಡವು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 