ಮುಂಡಗೋಡ ಕೆಡಿಪಿ ಸಭೆ: ಜನರಿಗೆ ಯೋಜನೆಗಳು ತಲುಪಲಿ: ಹೆಬ್ಬಾರ್ ಖಡಕ್ ಎಚ್ಚರಿಕೆ!
Mundagoda KDP meeting: Let the projects reach the people: Hebbar Khadak warns!
ಲೋಕದರ್ಶನ ವರದಿ
ಮುಂಡಗೋಡ 09: ಪಟ್ಟಣದ ತಾಲೂಕು ಪಂಚಾಯತ್ ಸಭಾಭವನದಲ್ಲಿ ಗುರುವಾರ ಶಾಸಕ ಶಿವರಾಮ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.
ಸಭೆಯಲ್ಲಿ ವಿವಿಧ ಇಲಾಖೆಗಳ ಕಾರ್ಯಚಟುವಟಿಕೆಗಳ ಕುರಿತು ಸಮಗ್ರ ಪರೀಶೀಲನೆ ನಡೆಸಿದ ಶಾಸಕರು, ಸರ್ಕಾರದ ಯೋಜನೆಗಳು ಯಾವುದೇ ಲೋಪವಿಲ್ಲದೆ ಜನರಿಗೆ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಆರೋಗ್ಯ ಇಲಾಖೆಯ: ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ ಮಾತನಾಡಿ, ತಾಲೂಕಿನಲ್ಲಿ ವೈದ್ಯರ ಕೊರತೆ ಇರುವುದಾಗಿ ತಿಳಿಸಿದರು.
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸ್ವರೂಪರಾಣಿ ಪಾಟೀಲ ಮಾತನಾಡಿ ತಾಲೂಕು ಆಸ್ಪತ್ರೆಯಲ್ಲಿ ಒಟ್ಟು 14 ವೈದ್ಯರ ಅವಶ್ಯಕತೆ ಇದ್ದು, ಅದರಲ್ಲಿ 10 ಮಂದಿ ತಜ್ಞ ವೈದ್ಯರು ಇರಬೇಕಾಗಿದ್ದು, ಪ್ರಸ್ತುತ 8 ಮಂದಿ ತಜ್ಞ ವೈದ್ಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಮಕ್ಕಳ ಹಾಗೂ ಕಣ್ಣಿನ ಚಿಕಿತ್ಸಾ ತಜ್ಞರು ಸೇರೆ್ಡಯಾಗಿರುವುದರಿಂದ ಒಟ್ಟು ವೈದ್ಯರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ವಿವರಿಸಿದರು. ಆರಿ್ಬಎಸ್ಕೆ (ಖಃಖಏ) ಯೋಜನೆಯಡಿ ಗ್ರಾಮಗಳಿಗೆ ಭೇಟಿ ನೀಡಿ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಒಟ್ಟು 32 ಪ್ರಕರಣಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದರಲ್ಲಿ 6 ಮಕ್ಕಳಿಗೆ ಹೃದಯ ಸಂಬಂಧಿತ ಹಾಗೂ 2 ಮಕ್ಕಳಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಉಚಿತವಾಗಿ ನೆರವೇರಿಸಲಾಗಿದೆ. ಒಟ್ಟು 24ಕ್ಕೂ ಹೆಚ್ಚು ಉಚಿತ ಶಸ್ತ್ರಚಿಕಿತ್ಸೆಗಳು ಯಶಸ್ವಿಯಾಗಿ ನಡೆದಿವೆ ಎಂದು ತಿಳಿಸಿದರು. ಅನಾವಶ್ಯಕ ಸಿಜೇರಿಯನ್ ಕಡಿಮೆ ಮಾಡಿ ನಾರ್ಮಲ್ ಡೆಲಿವರಿ ಹೆಚ್ಚಿಸಲು ಶಾಸಕರು ಸೂಚಿಸಿದರು.
ಅರಣ್ಯ ಇಲಾಖೆಗೆ ಸೂಚನೆ: ಹೊಸ ಅತಿಕ್ರಮಣಕ್ಕೆ ಅವಕಾಶ ನೀಡಬಾರದು. ಜಿಪಿಎಸ್ ಪಡೆದ ಅತಿಕ್ರಮಣದಾರರಿಗೆ ತೊಂದರೆ ನೀಡದೆ, ಬೆಳೆ ಹಾನಿಗೆ ಮಾನವೀಯತೆ ಆಧಾರವಾಗಿ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹೆಸ್ಕಾಂ: ಗೃಹಜ್ಯೋತಿ ಯೋಜನೆಯಡಿ ತಿಂಗಳಿಗೆ ಸುಮಾರು ರೂ.99 ಲಕ್ಷ ಮೌಲ್ಯದ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಲಾಯಿತು.
ಕೆಎಸ್ಆರಿ್ಟಸಿ: ಕೆಎಸ್ಆರಿ್ಟಸಿ ವತಿಯಿಂದ ಮಹಿಳೆಯರ ಉಚಿತ ಪ್ರಯಾಣ ಯೋಜನೆಯಡಿ ತಿಂಗಳಿಗೆ ಸುಮಾರು 50 ಲಕ್ಷ ರೂಪಾಯಿ ವೆಚ್ಚವಾಗುತ್ತಿದೆ ಎಂದು ತಿಳಿಸಲಾಯಿತು. ತೋಟಗಾರಿಕೆ ಇಲಾಖೆ: ತಾಲೂಕಿನಲ್ಲಿ ಸುಮಾರು 545 ಹೆಕ್ಟೇರ್ ಪ್ರದೇಶದಲ್ಲಿ ಮಾವಿನ ಬೆಳೆ ಬೆಳೆಯಲಾಗುತ್ತಿದ್ದು, ಅದರ ಅಭಿವೃದ್ಧಿಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಲಾಯಿತು.
ಈ ಸಭೆಯಲ್ಲಿ ತಾಲೂಕು ದಂಡಾಧಿಕಾರಿ ಶಂಕರ ಗೌಡಿ, ತಾ.ಪಂ. ಇಒ ಟಿ.ವೈ. ದಾಸನಕೊಪ್ಪ, ಕೆಡಿಡಿಸಿ ಬ್ಯಾಂಕ್ ನಿರ್ದೇಶಕ ಎಚ್.ಎಂ. ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ದ್ಯಾಮಣ್ಣ ಮಡ್ಲಿ, ಎನ್.ಎಮ್.ದುಂಡಸಿ, ಗೋಪಾಲ ಪಾಟೀಲ್ , ಸೇರಿದಂತೆ ಪಶುಸಂಗೋಪನೆ ಇಲಾಖೆ,ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ,ಫ್ರಾರೆಸ್ಟ್ ಇಲಾಖೆ,ಆರೋಗ್ಯ ಇಲಾಖೆ, ಶಿಶುಪಾಲನೆ ಇಲಾಖೆ,ನೀರಾವರಿ ಇಲಾಖೆ,ಹೆಸ್ಕಾಂ ಇಲಾಖೆ,ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 