ಗ್ಯಾರಂಟಿ ಅನುಷ್ಟಾನ ಸದಸ್ಯರಿಂದ ಮುಂಡರಗಿ ಬಸ್ ನಿಲ್ದಾಣ ಪರೀಶೀಲನೆ
Mundaragi Bus Stand Inspection by Guaranty Anushthan Members
ಸ್ವಚ್ಛತೆಗೆ ಪ್ರಥಮ ಆದ್ಯತೆ ವಹಿಸಲು ಜಿಲ್ಲಾಧ್ಯಕ್ಷ ಬಿ.ಬಿ.ಅಸೂಟಿ ಸೂಚನೆ
ಗದಗ 07: ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ ಯವರ ನೇತೃತ್ವದಲ್ಲಿ ಮುಂಡರಗಿ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಅಧ್ಯಕ್ಷರಾದ ಡಿ.ಡಿ. ಮುರನಾಳ ರವರ ಹಾಗೂ ಸರ್ವ ಸದಸ್ಯರ ಸಂಯುಕ್ತಾಶ್ರಯದಲ್ಲಿ ಗುರುವಾರ ದಂದು ಮುಂಡರಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸ್ಥಾನಿಕ ಪರೀಶೀಲನೆ ಮಾಡಿ ಪ್ರಯಾಣಿಕರ ಅಗತ್ಯ ಮೂಲಭೂತ ಸೌಕರ್ಯಗಳ ವ್ಯವಸ್ಥೆಯ ಪರೀಶೀಲನೆ ನಡೆಸಿದರು.
ಮೊದಲು ಬಸ್ ನಿಲ್ದಾಣದ ಆವರಣವನ್ನು ಪರೀಶೀಲನೆ ನಡೆಸಿದ ತಂಡವು ನಿಲ್ದಾಣದ ಸ್ವಚ್ಛತೆಗೆ ಗಮನ ಹರಿಸಬೇಕು. ಮುಂಬರುವ ಜುಲೈ 25.ರಂದು ಪುನ: ಬಸ್ನಿಲ್ದಾಣಕ್ಕೆ ಸ್ವಚ್ಛತೆಯ ಪರೀಶೀಲನೆಗಾಗಿ ಆಗಮಿಸುವೆ. ಆ ಸಂದರ್ಭದಲ್ಲಿ ನಿಲ್ದಾಣ ಆವರಣ ಶುಚಿಯಾಗಿರಬೇಕು. ಎಂದು ಜಿಲ್ಲಾಧ್ಯಕ್ಷರಾದ ಬಿ ಬಿ ಅಸೂಟಿ ಯವರು ನುಡಿದರು. ಅದರಂತೆ ನಿಲ್ದಾಣದಲ್ಲಿನ ಸಾರ್ವಜನಿಕರಿಗೆ ಕೂರಲು ಉತ್ತಮ ಆಸನಗಳ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಅಲ್ಲದೇ ಪ್ಲಾಸ್ಟಿಕ್ ಮುಕ್ತ ನಿಲ್ದಾಣ ಆಗಬೇಕು. ಶಾಲೆಯ ವಿದ್ಯಾರ್ಥಿಗಳಿಗೆ ತಮ್ಮ ಗ್ರಾಮಗಳಿಂದ ಮುಂಡರಗಿ ಗೆ ಬಂದು ಹೋಗಲು ಸರಿಯಾದ ಬಸ್ಸಿನ ವ್ಯವಸ್ಥೆ ಮಾಡಬೇಕು ಈ ಕುರಿತು ಅಧಿಕಾರಿಗಳು ಕ್ರಮ ವಹಿಸುವಂತೆ ಬಿ.ಬಿ.ಅಸೂಟಿ ನಿರ್ದೇಶನ ನೀಡಿದರು.
ಶೌಚಾಲಯ ವೀಕ್ಷಣೆ : ನಿಲ್ದಾಣದ ಆವರಣದಲ್ಲಿರುವ ಶೌಚಾಲಯದ ಪರೀಶೀಲನೆ ನಡೆಸಿ ಅಲ್ಲಿಯೂ ಸಹ ಸ್ವಚ್ಛತೆ ಅಗತ್ಯವಾಗಿದೆ. ವಿಕಲಚೇತನರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಬೇಕು ಅಲ್ಲದೇ ಸಾರ್ವಜನಿಕರಿಂದ ನಿಗದಿತ ಶುಲ್ಕ ಪಡೆದು ಸಾರ್ವಜನಿಕರಿಗೆ ಶೌಚಾಲಯ ಬಳಕೆಗೆ ದೊರೆಯಬೇಕು. ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದಿದ್ದು. ನಿಗದಿದ್ದ ದರದ ಬೋರ್ಡ್ ಹಾಕಬೇಕು ಪುನ: ದೂರುಗಳು ಬರದಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ನಿಗಾ ವಹಿಸುವಂತೆ ಅವರು ಸೂಚಿಸಿದರು. ವಿಶ್ರಾಂತಿ ಕೊಠಡಿ : ನಿಲ್ದಾಣದ ಆವರಣದಲ್ಲಿರುವ ಶಿಶು ಪಾಲನಾ ಆರೈಕೆಯ ವಿಶ್ರಾಂತಿ ಕೊಠಡಿಗೆ ಭೇಟಿ ನೀಡಿದ ಅವರು ವಿಶ್ರಾಂತಿ ಕೊಠಡಿಯಲ್ಲಿ ಶುದ್ಧ ಗಾಳಿ, ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ಜೊತೆಗೆ ಶುಭ್ರವಾಗಿರುವಂತೆ ನೋಡಿಕೊಳ್ಳಬೇಕು ಹಾಗೂ ಪ್ರತಿನಿತ್ಯ ವಿಶ್ರಾಂತಿ ಕೊಠಡಿಗೆ ಸಾರ್ವಜನಿಕರು ಆಗಮಿಸುವಂತೆ ಶುಚಿಯಾಗಿಟ್ಟುಕೊಳ್ಳಲು ಸಾರಿಗೆ ಸಂಸ್ಥೆಯ ಅಧಿಕಾರಿ.ಡಿ.ಸಿ ದೇವರಾಜ ಅವರಿಗೆ ಜಿಲ್ಲಾಧ್ಯಕ್ಷ ಬಿ.ಬಿ.ಅಸೂಟಿ ನಿರ್ದೇಶನ ನೀಡಿದರು. ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯಿಂದ ಜುಲೈ. 25ಕ್ಕೆ ಪುನ: ಪರೀಶೀಲನೆಗೆ ಆಗಮಿಸಲಾಗುವುದು. ಆ ಸಂದರ್ಭದಲ್ಲಿ ಇಂದು ನೀಡಿದ ಎಲ್ಲ ಸೂಚನೆಗಳು ಕಾರ್ಯರೂಪಕ್ಕೆ ಬಂದಿರಬೇಕು. ಇಲ್ಲವಾದಲ್ಲಿ ಸಂಭಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಆಗ್ರಹಿಸಲಾಗುವುದು ಎಂದರು.
ಈ ಸಂಧರ್ಭದಲ್ಲಿ ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಸದಸ್ಯರಾದ ಈಶ್ವರ ಹುಣಸಿಕಟ್ಟಿ, ಹುಲ್ಕೇಶ್ ಗೌಡ ಪಾಟೀಲ್ ಮುಂಡರಗಿ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮುಂಡರಗಿ ತಾಲೂಕಾ ಸಮಿತಿಯ ಅಧ್ಯಕ್ಷರಾದ ದೇವಪ್ಪ ಡಿ ಮುರನಾಳ ತಾಲೂಕ ಗ್ಯಾರಂಟಿ ಸಮಿತಿಯ ಸದಸ್ಯರಾದಜೈಲಾನಸಾಬ್ ಕೆ ವಡ್ಡಟ್ಟಿ,ನಾಗರಾಜ ಸಜ್ಜನ, ವಿಶ್ವನಾಥಪಾಟೀಲ್, ರಾಮಣ್ಣ ಮಾಳಗಿಮನಿ, ಮುತ್ತುರಾಜ್ ಮಾರುತಿ ಹೊಸಮನಿ, ಗಣೇಶ ರಾಠೋಡ್, ಶ್ರೀಮತಿ ಗೀತಾ ಕೆ ನಾಡಗೌಡರ, ಕಾಶಪ್ಪ ಹೊನ್ನೂರ, ನಿಂಗಪ್ಪ ಎಮ್ ಮಜ್ಜಿಗೆ, ಸುರೇಶ ಮೇಗಿಲಮನಿ, ಶರಣಪ್ಪ ಮಲ್ಲಾಪುರ, ಉಮೇಶ ಕಲಾಲ್, ಶ್ರೀಮತಿ ಭುವನೇಶ್ವರಿ ಕಲ್ಲಕುಟಿಗ, ಮಹೇಶಕುಮಾರ ದ್ರಾಕ್ಷಿ, ಹಾಗೂ ಸಮಸ್ತ ಅಧಿಕಾರಿ ವೃಂದದವರು ಉಪಸ್ಥಿತರಿದ್ದರು.
ಜನಸಮುದಾಯದೊಂದಿಗೆ ಗ್ಯಾರಂಟಿ ಸಂವಾದ
ಮುಂಡರಗಿ ಬಸ್ ನಿಲ್ದಾಣದ ಆವರಣದಲ್ಲಿನ ಪ್ರಯಾಣಿಕ ಮಹಿಳೆಯರೊಂದಿಗೆ ಹಾಗೂ ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಸಮಿತಿಯ ಸದಸ್ಯರ ತಂಡವು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಹಾಗೂ ಯಶಸ್ಸಿನ ಕುರಿತು ಜನಾಭಿಪ್ರಾಯಗಳನ್ನು ಆಲಿಸಿದರು. ಶಕ್ತಿ ಯೋಜನೆ ಮಹಿಳೆಯರ ಸಬಲತೆಗೆ ಶಕ್ತಿಯಾಗಿ ನಿಂತಿರುವುದು ಅಕ್ಷರಶ: ಸತ್ಯ. ಅದರಂತೆ ಸುಸ್ಥಿರ ಬದುಕಿಗಾಗಿ ಗೃಹಲಕ್ಷಿ ಯೋಜನೆ, ಹಸಿವು ಮುಕ್ತ ಕರ್ನಾಟಕಕ್ಕೆ ಅನ್ನಭಾಗ್ಯ ಹಾಗೂ ಬಡವರ ಆಶಾಕಿರಣ ಗೃಹ ಜ್ಯೋತಿ, ನಿರುದ್ಯೋಗ ನಿವಾರಣೆಗೆ ಯುವನಿಧಿ ಸಹಕಾರಿಯಾಗಿವೆ ಎಂದು ಫಲಾನುಭವಿಗಳು ತಮ್ಮ ಮನದಾಳದ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. ಸಚಿವರಾದ ಎಚ್.ಕೆ.ಪಾಟೀಲ ಸೇರಿದಂತೆ ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು. ಬಿ ಬಿ ಅಸೂಟಿಅಧ್ಯಕ್ಷರು ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಗದಗ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 