ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರ ಪ್ರವಾಸ
Municipal Administration and Haj Minister Rahim Khan's tour
ಬಳ್ಳಾರಿ 14: ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಆ.14 ಮತ್ತು 15 ರಂದು ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಳ್ಳುವರು.
ಆ.14 ರಂದು ಮಧ್ಯಾಹ್ನ 01 ಗಂಟೆಗೆ ಬೆಂಗಳೂರಿನಿಂದ ಹೊರಟು 03 ಗಂಟೆಗೆ ಬಳ್ಳಾರಿಗೆ ಆಗಮಿಸುವರು. ಬಳಿಕ ಸಂಜೆ 04.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ನಗರ ಸ್ಥಳೀಯ-ಸಂಸ್ಥೆಗಳ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ಬಳಿಕ ವಾಸ್ತವ್ಯ ಮಾಡುವರು.ಆ.15 ರಂದು ಬೆಳಿಗ್ಗೆ 08.20 ಕ್ಕೆ ನಗರದ ಡಾ.ರಾಜ್‌ಕುಮಾರ್ ಉದ್ಯಾನವನದ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಗೌರವ ಸಮರ್ಪಣೆ ಮಾಡುವರು.
ಬಳಿಕ ಬೆಳಿಗ್ಗೆ 09 ಗಂಟೆಗೆ ನಗರದ ಬಿಎಂಸಿಆರ್‌ಸಿ ಮೈದಾನದ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಏರಿ್ಡಸಿರುವ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಪಥ ಸಂಚಲನ ವೀಕ್ಷಣೆ, ಗೌರವ ವಂದನೆ ಸ್ವೀಕಾರ ಮಾಡುವರು.ಬಳಿಕ 10.30 ಕ್ಕೆ ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ.ಮುರಳಿಧರ ಅವರು ತಿಳಿಸಿದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 