ಇಂಡಿ ಕ್ಷೇತ್ರದ ಮುಖಂಡ ಬಿ.ಡಿ.ಪಾಟೀಲರಿಂದ ರಾಷ್ಟ್ರೀಯ ಕಲಾರತ್ನ ಪ್ರಶಸ್ತಿ ಪುರಸ್ಕೃತ ಮುರಡಿಗೆ ಸನ್ಮಾನ
Muradi was honored with the National Kalaratna award by Indi Constituency leader BD Patil.
ದೇವರಹಿಪ್ಪರಗಿ 23 : ಗ್ರಾಮೀಣ ಭಾಗದ ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಹಾಗೂ ಹಲವಾರು ವರ್ಷಗಳಿಂದ ತಮ್ಮದೇ ಆದ ಜಾನಪದ ಕಲೆಯನ್ನು ಹಾಡಕಿ ಮೂಲಕ ನಾಡಿನಾದ್ಯಂತ ಹೆಸರುವಾಸಿ ಆಗಿರುವ ಹಾಡಕಿ ಹಾಗೂ ಡೊಳ್ಳಿನ ಪದಗಳ ಕಲಾವಿದ ಗುರುನಾಥ ಮುರಡಿ ಅವರಿಗೆ ರಾಷ್ಟ್ರ ಮಟ್ಟದ ಜಾನಪದ ರಾಷ್ಟ್ರೀಯ ಕಲಾ ರತ್ನ ಪ್ರಶಸ್ತಿ ನೀಡಿರುವುದು ಶ್ಲಾಘನೀಯ ಎಂದು ಇಂಡಿ ಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡರಾದ ಬಿ.ಡಿ.ಪಾಟೀಲ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರದಂದು ಕಲಾವಿದ ಗುರುನಾಥ ಮುರಡಿಗೆ ಸನ್ಮಾನಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜಾನಪದ ಸೊಗಡಿನ ಕುಟುಂಬದ ಹಿನ್ನೆಲೆಯಿಂದ ಬಂದು, ತಮ್ಮದೇ ವಿಭಿನ್ನ ಶೈಲಿಯ ಮೂಲಕ ನಾಡಿನಾದ್ಯಂತ ಹೆಸರುವಾಸಿ ಆಗಿರುವ ನಮ್ಮ ಸಮುದಾಯದ ಜನಪದ ಕಲಾವಿದನಿಗೆ ರಾಷ್ಟ್ರ ಮಟ್ಟದ ಜಾನಪದ ಪ್ರಶಸ್ತಿ ಸಿಕ್ಕಿರುವುದು ಹೆಮ್ಮೆಯ ಸಂಗತಿ ಇನ್ನು ಹತ್ತು ಹಲವು ಪ್ರಶಸ್ತಿಗಳು ಸಿಗಲಿ ಎಂದು ಶುಭ ಹಾರೈಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕಲಾವಿದ ಗುರುನಾಥ ಮುರಡಿ ಅವರು, ಇಂಡಿ ಭಾಗದಲ್ಲಿ ತಮ್ಮದೇ ಆದ ವಿಶಿಷ್ಟ ವ್ಯಕ್ತಿತ್ವ ರೂಪಿಸಿಕೊಂಡಿರುವ ಸಮುದಾಯದ ಮುಖಂಡರುಗಳಾದ ಬಿ.ಡಿ. ಪಾಟೀಲರು ಸನ್ಮಾನಿಸಿ, ಗೌರವಿಸಿದ್ದು ನನ್ನ ಜೀವನದ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಶರಣು ಪೂಜಾರಿ, ಅಪ್ಪು ಪಟ್ಟೇದ, ಆನಂದ ವಗ್ಗರ, ಮಾಡ್ರಿ ಸೈನಿಕ ಚಂದ್ರಮ ಪೂಜಾರಿ, ಅಮೋಗಿ ಕಗ್ಗೋಡ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 