ಸ್ವ-ಉದ್ಯೋಗಕ್ಕೆ ದಾರಿ ತೋರಿದ ಅಣಬೆ ಬೇಸಾಯ ತರಬೇತಿ
Mushroom cultivation training paves the way for self-employment
ಲೋಕದರ್ಶನ ವರದಿ
ಧಾರವಾಡ 12 : ಕೃಷಿ ವಿಶ್ವವಿದ್ಯಾಲಯದ ಐ.ಸಿ.ಎ.ಆರ್.-ಹಿಕೃಷಿ ವಿಜ್ಞಾನ ಕೇಂದ್ರ, ಧಾರವಾಡ ಹಾಗೂ ನಮ್ಮ ಸಂಸ್ಕೃತಿ ಸೇವಾ ಸಂಸ್ಥೆ ಇವರ ಸಹಯೋಗದೊಂದಿಗೆ ಅಣಬೆ ಬೇಸಾಯವನ್ನು ಸ್ವ-ಉದ್ಯೋಗ ಹಾಗೂ ಆದಾಯೋತ್ಪಾದಕ ಚಟುವಟಿಕೆಯಾಗಿ ಉತ್ತೇಜಿಸುವ ಉದ್ದೇಶದಿಂದ ಆಗಸ್ಟ್ 8, 10 ಮತ್ತು 11, 2026 ರಂದು ಕೃಷಿ ವಿಜ್ಞಾನ ಕೇಂದ್ರ, ಧಾರವಾಡದಲ್ಲಿ ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಶ್ವವಿದ್ಯಾಲಯ, ಧಾರವಾಡದ ವಿಸ್ತರಣಾ ನಿರ್ದೇಶಕರಾದ ಡಾ. ಮಂಜುಳಾ ಎನ್. ಅವರು ಮಾತನಾಡಿ, ಅಣಬೆ ಬೇಸಾಯವು ಕಡಿಮೆ ಸ್ಥಳ, ಕಡಿಮೆ ಸಂಪನ್ಮೂಲ ಹಾಗೂ ಸೀಮಿತ ಬಂಡವಾಳದಲ್ಲಿ ಕೈಗೊಳ್ಳಬಹುದಾದ ಉತ್ತಮ ಆದಾಯದ ಚಟುವಟಿಕೆಯಾಗಿದ್ದು, ವಿಶೇಷವಾಗಿ ಮಹಿಳೆಯರು ಹಾಗೂ ಯುವಕರಿಗೆ ಸ್ವ-ಉದ್ಯೋಗದ ಅವಕಾಶಗಳನ್ನು ಕಲ್ಪಿಸುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದರು.
ನಮ್ಮ ಸಂಸ್ಕೃತಿ ಸೇವಾ ಸಂಸ್ಥೆಯ ಅಧ್ಯಕ್ಷರಾದ ರವಿ ಸಂಗನಾಳ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಗ್ರಾಮೀಣ ಮಹಿಳೆಯರು ಮತ್ತು ಯುವಕರು ಅಣಬೆ ಬೇಸಾಯವನ್ನು ಸ್ವ-ಉದ್ಯಮವಾಗಿ ಅಳವಡಿಸಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವ ಜೊತೆಗೆ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿಕೊಳ್ಳಬಹುದು ಎಂದು ತಿಳಿಸಿದರು. ಐ.ಸಿ.ಎ.ಆರ್ಹಿಕೃಷಿ ವಿಜ್ಞಾನ ಕೇಂದ್ರ, ಧಾರವಾಡದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಕೆ. ಪಿ. ಗುಂಡಣ್ಣವರ ಅವರು ಗಣ್ಯರು, ರೈತರು ಹಾಗೂ ತರಬೇತಿದಾರರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣ್ಯರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಧಾರವಾಡ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ ಮಹಿಳೆಯರು ಹಾಗೂ ಯುವಕರು ತರಬೇತಿಯಲ್ಲಿ ಭಾಗವಹಿಸಿದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 