ವಿಶ್ವ ಸಂಗೀತ ದಿನಾಚರಣೆಯಲ್ಲಿ ಸಂಗೀತ ಶಿಕ್ಷಕಿ ಸವಿತಾ ಕುಲಕರ್ಣಿಗೆ ಸನ್ಮಾನ
Music teacher Savita Kulkarni honoured on World Music Day
ಹುಬ್ಬಳ್ಳಿ 22 : ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರು, ಸಂಗೀತ ಶಿಕ್ಷಕಿ ಸವಿತಾ ಎಂ ಕುಲಕರ್ಣಿ ಅವರು ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿಶ್ವ ಸಂಗೀತ ದಿನ ಅಂಗವಾಗಿ ಹಿಂದೂಸ್ತಾನಿ ಹಾಗು ಸುಗಮ ಸಂಗೀತ ಗಾಯಕಿ, ಡಾ. ಜೆ.ವಿ. ಜೋಶಿ ರೋಟರಿ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಸಂಗೀತ ಶಿಕ್ಷಕಿ ಸವಿತಾ ಎಂ ಕುಲಕರ್ಣಿ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು, ಮಾಲಾರೆ್ಣ ಮಾಡಿ ಆತ್ಮೀಯವಾಗಿ. ಸನ್ಮಾನಿಸಲಾಯಿತು.
ಅಭಿನಂದನೆಗಳನ್ನು ಸಲ್ಲಿಸಿ, ಶುಭ ಕೋರಿದರು. ಸೋಹನ ಸುರೇಶ ಹೊರಕೇರಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಅದ್ಯಕ್ಷರು, ಸಾಹಿತಿ ಪ್ರೊ.ಎಸ್.ವಿ. ಪಟ್ಟಣಶೆಟ್ಟಿ, ನಿವೃತ್ತ ವೈದ್ಯಾಧಿಕಾರಿ ಡಾ.ವಿ.ಬಿ.ನಿಟಾಲಿ, ಹಿರಿಯರಾದ. ವೀರಣ್ಣ ಗೋವೇಶ್ವರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮುಂತಾದವರು ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 