ಹೊಸಪೇಟೆಯಲ್ಲಿ ಡಾ. ಎಸ್. ಜಾನಕಿ ಸ್ಮರಣಾರ್ಥ ಸಂಗೀತ ನಮನ
Musical Tribute in Memory of Dr. S. Janaki in Hosapete
ಲೋಕದರ್ಶನ ವರದಿ
ಹೊಸಪೇಟೆ 28: ಗಾನಗಂಗಾ ಕಲಾ ಪ್ರತಿಷ್ಠಾನ (ರಿ.) ಹೊಸಪೇಟೆ ವತಿಯಿಂದ ಖ್ಯಾತ ಗಾಯಕಿ ದಿವಂಗತ ಡಾ. ಎಸ್. ಜಾನಕಿ ಅವರ ಸ್ಮರಣಾರ್ಥ ಸಂಗೀತ ಗೀತೆ ನಮನ ಕಾರ್ಯಕ್ರಮವನ್ನು ನಗರದಲ್ಲಿನ ಹೋಟೆಲ್ ಮಲ್ಲಿಗೆ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಸಂಜೆ 6ರಿಂದ ರಾತ್ರಿ 10ರವರೆಗೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕುರಿಶಿವಮೂರ್ತಿ ಅವರು ಡಾ. ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಮಾಲಾರೆ್ಣ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಡಾ. ಎಸ್. ಜಾನಕಿ ಅವರು 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡಿ ಸಂಗೀತ ಪ್ರಿಯರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ ಎಂದು ಸ್ಮರಿಸಿದರು.
ಆಂಧ್ರ ಪ್ರದೇಶದಲ್ಲಿ ಜನಿಸಿ, ತಮಿಳುನಾಡಿನಲ್ಲಿ ಬೆಳೆದು, ಕನ್ನಡ ನಾಡಿನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತಮ್ಮ ಬದುಕಿನ ಬಹುಭಾಗ ಕಳೆದ ಅವರು ಭಾರತೀಯ ಸಂಗೀತ ಕ್ಷೇತ್ರದ ಅಪೂರ್ವ ಗಾಯಕಿಯಾಗಿದ್ದರು ಎಂದು ಬಣ್ಣಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕಲಿಗಳ ಕ್ರಿಯಾಶೀಲ ಸಮಿತಿ ಅಧ್ಯಕ್ಷ ಹಾಗೂ ವಕೀಲ ಪಿ. ವೆಂಕಟೇಶ್, ಗುಜ್ಜಲ್ ಗಣೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಹೋಟೆಲ್ ಮಲ್ಲಿಗೆ ಮಾಲೀಕ ಶ್ರೀಪಾದ, ರಂಗ ಕಲಾವಿದ ಗುಂಡಿ ರಮೇಶ್, ನವರಂಗ್ ಮೆಲೋಡಿಸ್ನ ಹಾಲೋ ಜೋಶಿ, ತಿರುಮಲ ಬೇಕರಿ ಮಾಲೀಕ ಬೋಜರಾಜ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಗಾಯಕಿಯರಾದ ಕಮಲಾ ಕುಲಕರ್ಣಿ, ಸುಮಾ ಸೇರಿದಂತೆ ಹಲವು ಕಲಾವಿದರು ಡಾ. ಎಸ್. ಜಾನಕಿ ಅವರ ಜನಪ್ರಿಯ ಗೀತೆಗಳನ್ನು ಹಾಡಿ ಸಂಗೀತ ನಮನ ಸಲ್ಲಿಸಿದರು. ಕಾರ್ಯಕ್ರಮದ ಪ್ರಾಸ್ತಾವಿಕ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 