ಉಭಯ ಗುರುಗಳ ಜಾತ್ರಾ ಮಹೋತ್ಸವದಲ್ಲಿ ಅಂಧ ವಿದ್ಯಾರ್ಥಿಗಳಿಂದ ಸಂಗೀತ ಸೇವೆ

ಉಭಯ ಗುರುಗಳ ಜಾತ್ರಾ ಮಹೋತ್ಸವದಲ್ಲಿ ಅಂಧ ವಿದ್ಯಾರ್ಥಿಗಳಿಂದ ಸಂಗೀತ ಸೇವೆ Musical offering by visually impaired students at the Jatra Mahotsava of the two Gurus.

ಗದಗ, ಜು. ೩: ಪರಮಪೂಜ್ಯ ಗಾನಯೋಗಿ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ ೮೨ನೇ ಪುಣ್ಯಸ್ಮರಣೋತ್ಸವ, ಪದ್ಮಭೂಷಣ ಲಿಂ. ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ೧೬ನೇ ಪುಣ್ಯಸ್ಮರಣೋತ್ಸವ ಹಾಗೂ ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ವಿಶೇಷ ಸಂಗೀತ ಸೇವೆ ನಡೆಯಿತು. 

ಈ ಸಂದರ್ಭದಲ್ಲಿ ಪಂ. ಪಂಚಾಕ್ಷರಿ ಗವಾಯಿಗಳವರ ಅಂಧರ ವಸತಿಯುತ ವಿಶೇಷ ಸಂಗೀತ ಶಾಲೆಯ ಅಂಧ ವಿದ್ಯಾರ್ಥಿಗಳು ಭಕ್ತಿಪೂರ್ಣ ಸಂಗೀತ ಸೇವೆ ಸಲ್ಲಿಸಿ, ನೆರೆದಿದ್ದ ಭಕ್ತರ ಮೆಚ್ಚುಗೆಗೆ ಪಾತ್ರರಾದರು. 

ಕಾರ್ಯಕ್ರಮದಲ್ಲಿ ಶಿರಹಟ್ಟಿಯ ಜ. ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.