ಕೋಝಿಕೋಡ್, ಜ 21: ಭಾರತೀಯ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಶಾಸಕ ಎಂ. ಕೆ. ಮುನೀರ್, ಬಿಜೆಪಿ ನೇತೃತ್ವದ ಕೇಂದ್ರ ಎನ್ ಡಿಎ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ( ಎನ್ ಆರ್ ಸಿ) ಪ್ರಕ್ರಿಯೆ ವಿರೋಧಿಸಿ ಮಂಗಳವಾರ ಇಲ್ಲಿ 12 ಗಂಟೆಗಳ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಕೇರಳ ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿಥಲ ಕಡಲ ತಡಿಯಲ್ಲಿ ಉಪವಾಸ ಸತ್ಯಾಗ್ರಹವನ್ನು ಉದ್ಘಾಟಿಸಿದರು.
ಉಪವಾಸ ಸತ್ಯಾಗ್ರಹ ಸ್ಥಳದಲ್ಲಿ ಪ್ರತಿಪಕ್ಷ ಸಂಯುಕ್ತ ಪ್ರಜಾಸತ್ತಾತ್ಮಕ ರಂಗ( ಯುಡಿಎಫ್) ನಾಯಕರು ಉಪಸ್ಥಿತರಿದ್ದರು.
ಶಾಸಕ ಮುನೀರ್ ತಮ್ಮ ಉಪವಾಸ ಸತ್ಯಾಗ್ರಹವನ್ನು ಮಂಗಳವಾರ ರಾತ್ರಿ 9 ಗಂಟೆಗೆ ಸಮಾಪನಗೊಳಿಸಲಿದ್ದಾರೆ.