ಸಿ.ಟಿ.ರವಿ ಅವರ ಮುಲ್ಲಾ ಹೇಳಿಕೆ ಖಂಡಿಸಿ ಮುಸ್ಲಿಂ ಸಂಘಟನೆಗಳಿಂದ ಮನವಿ

ಸಿ.ಟಿ.ರವಿ ಅವರ ಮುಲ್ಲಾ ಹೇಳಿಕೆ ಖಂಡಿಸಿ ಮುಸ್ಲಿಂ ಸಂಘಟನೆಗಳಿಂದ ಮನವಿ Muslim organizations submit memorandum condemning C.T. Ravi's 'Mullah' remark

ದೇವರಹಿಪ್ಪರಗಿ 28 : ಬಿಜೆಪಿ ಮುಖಂಡ ಸಿ.ಟಿ.ರವಿ ಅವರು ಮುಲ್ಲಾಗಳ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿ ವಿವಿಧ ಮುಸ್ಲಿಂ ಸಂಘಟನೆಗಳ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ತಹಶೀಲ್ದಾರ್ ಅವರ ಮೂಲಕ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದ್ದಾರೆ.  ಪಟ್ಟಣದ ತಹಶೀಲ್ದಾರ್ ಕಚೇರಿಗೆ ಸಮುದಾಯದ ಮುಖಂಡರು ಭೇಟಿ ನೀಡಿ ಮನವಿ ಸಲ್ಲಿಸಿದ ಸಂಘಟನೆಗಳ ಪದಾಧಿಕಾರಿಗಳು, ನಂತರ ಮುಖಂಡರುಗಳಾದ ಎ.ಡಿ.ಮುಲ್ಲಾ, ಮುನೀರ್ ಅಹ್ಮದ್ ಮಳಖೇಡ ಹಾಗೂ  ಇಮ್ತಿಯಾಜ್ ಮುಲ್ಲಾ ಅವರು ಮಾತನಾಡಿ, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡುವ ರೀತಿಯ ಹೇಳಿಕೆಗಳನ್ನು ಸಾರ್ವಜನಿಕ ಜೀವನದಲ್ಲಿರುವ ನಾಯಕರು ನೀಡಬಾರದು.

ಯಾವುದೇ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹೇಳಿಕೆಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲ ಸಮುದಾಯಗಳ ಗೌರವವನ್ನು ಕಾಪಾಡುವ ಜವಾಬ್ದಾರಿ ಜನಪ್ರತಿನಿಧಿಗಳು ಮತ್ತು ರಾಜಕೀಯ ಮುಖಂಡರ ಮೇಲಿದೆ ಎಂದು ಮನವಿಯಲ್ಲಿ ತಿಳಿಸಿದರು.  ಈ ಸಂದರ್ಭದಲ್ಲಿ ಮುಖಂಡರುಗಳಾದ ಇಕ್ಬಾಲ್ ಬಿಜಾಪುರ,  ಹೈದರಸಾಬ್ ಮುಲ್ಲಾ,  ಜಬ್ಬಾರ್ ಚೌದ್ರಿ, ಸಮೀರ ಮಕಾಂದಾರ, ಸೈಪನ್ ಮುಲ್ಲಾ, ಬುಡ್ಡೇಸಾಬ ಮುಲ್ಲಾ, ದೌವಲಸಾಬ ಗಂಗೂರ, ಪ.ಪಂ ಮಾಜಿ ಅಧ್ಯಕ್ಷ ಭಾಸ್ಕರ ಗುಡಿಮನಿ ಸೇರಿದಂತೆ ವಿವಿಧ ಮುಸ್ಲಿಂ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.