ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಿರಬೇಕು: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
Must be prepared to manage potential flood situations: Deputy Commissioner Mohammad Roshan
ಲೋಕದರ್ಶನ ವರದಿ
ಬೆಳಗಾವಿ 07: ಕಳೆದ ಮೂರು ದಿನಗಳಿಂದ ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯ ಒಂಭತ್ತು ತಾಲೂಕುಗಳಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಎದುರಾಗಬಹುದಾದ ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಅಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಜು.7) ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ನದಿ ಪಾತ್ರಗಳಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೇತುವೆಗಳು ಮುಳಗುವ ಭೀತಿ ಇದ್ದು ಅಂತಹ ಸೇತುವೆಗಳ ಮೇಲೆ ಜನ, ಜಾನುವಾರು ಸಂಚಾರ ನಿಬಂರ್ಧಿಸಬೇಕು. ಈ ಕಾರ್ಯಕ್ಕೆ ಪೋಲಿಸ್ ಇಲಾಖೆ ಸಹಕಾರ ಪಡೆಯಲು ತಿಳಿಸಿದರು.
ಸಂಭವನೀಯ ಪ್ರವಾಹ ಎದುರಾದಲ್ಲಿ ನದಿ ಪಾತ್ರದಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಬೋಟಗಳ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಎಸ್.ಡಿ.ಆರ್.ಎಫ್ ಹಾಗೂ ಅಗ್ನಿ ಶಾಮಕ ತಂಡಗಳು ಪ್ರವಾಹದಂತಹ ಪರಿಸ್ಥಿತಿಯನ್ನು ಎದುರಿಸಲು ಸದಾ ಸನ್ನದ್ಧವಾಗಿರಬೇಕು. ತಹಶೀಲ್ದಾರರುಗಳು ಎಸ್.ಡಿ.ಆರ್.ಎಫ್. ತಂಡದೊಂದಿಗೆ ನಿರಂತರ ಸಮನ್ವಯ ಸಾಧಿಸಿ, ಅಗತ್ಯವಿದ್ದಲ್ಲಿ ಕೂಡಲೇ ಮಾಹಿತಿ ನೀಡಲು ಸೂಚಿಸಿದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 