ಗ್ರಾಮೀಣ ಅಭಿವೃದ್ಧಿ ಯೋಜನೆಗಳ ಸಮರ​‍್ಕ ಅನುಷ್ಠಾನಕ್ಕೆ ನನ್ನ ಮೊದಲ ಆಧ್ಯತೆ; ಸಮಸ್ಯೆ ಮುಕ್ತ ಧಾರವಾಡ ಗ್ರಾಮೀಣ ಜಿಲ್ಲೆ ಮಾಡಲು ಕ್ರಮ

My first priority is the effective implementation of rural development projects; Steps taken to make

ಗ್ರಾಮೀಣ ಅಭಿವೃದ್ಧಿ ಯೋಜನೆಗಳ ಸಮರ​‍್ಕ ಅನುಷ್ಠಾನಕ್ಕೆ ನನ್ನ ಮೊದಲ ಆಧ್ಯತೆ; ಸಮಸ್ಯೆ ಮುಕ್ತ ಧಾರವಾಡ ಗ್ರಾಮೀಣ ಜಿಲ್ಲೆ ಮಾಡಲು ಕ್ರಮ

  ಧಾರವಾಡ   20: ಇಂದು   ಬೆಳಿಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ ಅವರು ಜಿಲ್ಲೆಯ ಎಲ್ಲಾ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ, ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. 

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸವನ್ನು ನೀಡುವುದರಲ್ಲಿ ನೀರೀಕ್ಷಿತ ಮಟ್ಟದಲ್ಲಿ ಸಾಧನೆ ಆಗದೇ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ ಪಂಚಾಯತ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಪ್ರಗತಿ ಪರೀಶೀಲನಾ ಸಭೆಯನ್ನು ಆಯೋಜಿಸಿ, ಸದರಿ ಸಭೆಯಲ್ಲಿ ಶೇ.50 ಕ್ಕಿಂತ ಕಡಿಮೆ ಮಾನವ ದಿನಗಳನ್ನು ಸೃಜನೆ ಮಾಡಿರುವ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸಭೆಯಲ್ಲಿಯೇ ಎಚ್ಚರಿಕೆ ನೋಟಿಸನ್ನು ನೀಡಲಾಗಿದ್ದು, ಕನಿಷ್ಠ 75 ರಷ್ಟು ಸಾಧನೆ ಮಾಡುವಂತೆ ಸೂಚಿಸಲಾಗಿದೆ. ಎಲ್ಲಾ ಅನುಷ್ಠಾನಾಧಿಕಾರಿಗಳಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಪ್ರಗತಿ ಸಾಧಿಸಲು ನಿರ್ದೇಶನ ನೀಡಲಾಗಿದ್ದು, ವಷಾಂರ್ತ್ಯಕ್ಕೆ ನಿಗದಿತ ಗುರಿ ತಲುಪಲು ಕ್ರಮ ಕೈಕೊಳ್ಳಲಾಗುತ್ತದೆ ಎಂದು ವಿವರಿಸಿದರು.  

ಪ್ರತಿ ತಾಲೂಕಿನಲ್ಲಿ ಸಾಕಷ್ಟು ಬಯಲು, ಆವರಣ ಗೋಡೆ ಹೊಂದಿದ, ಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ ನಡುವೆ ಒಡಂಬಡಿಕೆಯೊಂದಿಗೆ  ಮುಂದಿನ ಆರ್ಥಿಕ ವರ್ಷದಲ್ಲಿ ಶಾಲಾ ವನ ನಿರ್ಮಿಸಲು ಯೋಜಿಸಲಾಗಿದೆ. ಯೋಜನೆಯಲ್ಲಿ ಕಾಮಗಾರಿಗಳ ಮುಕ್ತಾಯದ ದರ ಹೆಚ್ಚಿಸುವದು, ಕೂಲಿ ಮತ್ತು ಸಾಮಗ್ರಿ ಅನುಪಾತ ಕಾಯ್ದುಕೊಳ್ಳುವದು ಇತ್ಯಾದಿ ಮಾನದಂಡಗಳನ್ನು ಪಾಲಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಸಧ್ಯ 102 ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕೂಲಿಕಾರರ ಮಕ್ಕಳ ಆರೈಕೆಗಾಗಿ ಕೂಸಿನ ಮನೆಗಳನ್ನು ಸ್ಥಾಪಿಸಲಾಗಿದೆ. ಬಾಕಿ ಉಳಿದ ಗ್ರಾಮ ಪಂಚಾಯತಿಗಳಲ್ಲೂ ಇವುಗಳನ್ನು ಸ್ಥಾಪಿಸಲು ಸೂಚಿಸಿರುವದಾಗಿ ಅವರು ಹೇಳಿದರು.ಕರವಸೂಲಿ ಅಭಿಯಾನ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಭೂಮಿ ಮತ್ತು ಕಟ್ಟಡಗಳಿಗೆ ಸಂಬಂಧಿಸಿದಂತೆ ಪ್ರಸಕ್ತ ವರ್ಷದಲ್ಲಿ 2 ಬಾರಿ ತೆರಿಗೆ ವಸೂಲಾತಿ ಅಭಿಯಾನವನ್ನು ಕೈಗೊಂಡಿದ್ದು ಇರುತ್ತದೆ. ಈವರೆಗೆ 17 ಕೋಟಿಗಳಷ್ಟು ತೆರಿಗೆ ವಸೂಲಾತಿ ಮಾಡಿದ್ದು. ಕಳೆದ ಸಾಲಿಗೆ ಹೋಲಿಸಿದ್ದಲ್ಲಿ ರೂ.10 ಕೋಟಿಗಳಷ್ಟು ಹೆಚ್ಚಿನ ತೆರಿಗೆ ವಸೂಲಾತಿ ಮಾಡಲಾಗಿದೆ. ಮಾರ್ಚ 31 ರೊಳಗಾಗಿ ಪ್ರಸಕ್ತ ಸಾಲಿನ ಬೇಡಿಕೆಯನ್ನು ಶೇ.100 ರಷ್ಟು ವಸೂಲಾತಿ ಮಾಡುವ ಗುರಿಯನ್ನು ಹೊಂದಿದ್ದು, ಎಲ್ಲಾ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸಾಧಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.  

ಜಲ ಜೀವನ ಮಿಶನ್‌: ಜಿಲ್ಲೆಯಲ್ಲಿ ಜೆ.ಜೆ.ಎಂ ಯೋಜನೆಯಡಿ 388 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಅದರಂತೆ 355 ಕಾಮಗಾರಿಗಳು ಮುಕ್ತಾಯಗೊಂಡಿರುವುದಾಗಿ ತಿಳಿಸಿದರು. ಈಗಾಗಲೇ ಅಳವಡಿಸಲಾಗಿರುವ ಪೈಪ್ಲೈನ್ ಕಾಮಗಾರಿಗಳಲ್ಲಿ ಗ್ರಾಮದ ಒಳಗಿನ ಕಾಂಕ್ರಿಟ್ ರಸ್ತೆಗಳನ್ನು ಕೊರೆದು ಪೈಪ್ ಲೈನ್‌ಗಳನ್ನು ಅಳವಡಿಸಿದ್ದು, ಪೈಪ್ ಲೈನ್‌ಗಳನ್ನು 4-5 ಕಿ.ಮೀಗಳನ್ನು ಅಳವಡಿಸಿದ ನಂತರ ಒಂದೇ ಬಾರಿಗೆ ರಿಸ್ಟೊರೇಷನ್ ಕೆಲಸವನ್ನು ಕೈಗೊಳ್ಳಲಾಗುತ್ತಿದೆ ಎಂದರು.  

ಶುದ್ದ ಕುಡಿಯುವ ನೀರಿನ ಘಟಕ (ಖಓ ಘಟಕ): ಜಿಲ್ಲೆಯಲ್ಲಿ  467  ಶುದ್ದ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಕೆಲವೊಂದು ಕಡೆ ಕಾರ್ಯನಿರ್ವಹಿಸದೇ ಸ್ಥಗಿತಗೊಂಡಿದ್ದು, ಸಾರ್ವಜನಿಕರಿಗೆ ತೊಂದರೆ ಆಗಿರುವ ಕುರಿತು ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪರೀಶೀಲಿಸಿ, ಕೂಡಲೇ ಕ್ರಮವಹಿಸಿ, ಶುದ್ದ ಕುಡಿಯುವ ನೀರಿನ ಘಟಕಗಳು ಪುನಃ ಕಾರ್ಯನಿರ್ವಹಿಸುವಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು. 

ಬರಗಾಲ ನಿರ್ವಹಣೆ: ಮುಂಬರುವ ದಿನಗಳಲ್ಲಿ ಬಿಸಿಲಿನ ತಾಪದಿಂದ ಕುಡಿಯುವ ನೀರಿನ ಸಮಸ್ಯೆಯು ಉದ್ಬವಿಸಬಹುದಾಗಿರುವುದರಿಂದ ಜಿಲ್ಲೆಯ ಗ್ರಾಮೀಣ ಪ್ರದೇಶಗಳನ್ನು ನೀರಿನ ಲಭ್ಯತೆಗೆ ಅನುಸಾರವಾಗಿ 3 ಭಾಗಗಳಾಗಿ ವಿಂಗಡಿಸಲು ಈಗಾಗಲೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸೂಚಿಸಲಾಗಿದೆ.  

ಅದರಂತೆ ಅತೀ ಕಡಿಮೆ ಕುಡಿಯುವ ನೀರಿನ ಲಭ್ಯತೆಯನ್ನು ರೆಡ್ ಜೋನ್‌ಎಂದು ಮತ್ತು ಕಡಿಮೆ ಕುಡಿಯುವ ನೀರಿನ ಲಭ್ಯತೆಯ ಪ್ರದೇಶವನ್ನು ಯಲ್ಲೊ ಜೋನ್ ಎಂದು ಗುರುತಿಸಲಾಗಿದೆ. ಈ ಎರಡು ವಲಯಗಳಲ್ಲಿ ಲಭ್ಯವಿರುವ ನೀರಿನ ಮೂಲಗಳನ್ನು ಸಂರಕ್ಷಿಸಿ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸಲು ಕ್ರಮವಹಿಸಲಾಗುವುದು. ಅವಶ್ಯಕತೆ ಅನುಸಾರವಾಗಿ ಖಾಸಗಿ ಬೋರ್ವಲ್‌ಗಳಿಂದ ನೀರನ್ನು ಪಡೆದು ಕುಡಿಯುವ ನೀರಿನ ಸಮರ​‍್ಕ ವ್ಯವಸ್ಥೆಯನ್ನು ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.ಸ್ಮಶಾನ ಲಭ್ಯತೆ: ಜಿಲ್ಲೆಯ ಕೆಲವೊಂದು ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆಯ ಕುರಿತು ಜಾಗದ ಲಭ್ಯತೆಯ ಮಾಹಿತಿಯನ್ನು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಂದ ಪಡೆದು ಲಭ್ಯತೆ ಇದ್ದಲ್ಲಿ ಸ್ಮಶಾನಕ್ಕಾಗಿ ಜಾಗೆಯನ್ನು ಕಾಯ್ದಿರಿಸಲು ಪ್ರಸ್ತಾವನೆಯನ್ನು ಉಪ ವಿಭಾಗಾಧಿಕಾರಿಗಳು, ಧಾರವಾಡ ಇವರಿಗೆ ಕಳುಹಿಸಲಾಗುವುದು. ಜಾಗೆಯ ಲಭ್ಯತೆ ಇಲ್ಲದಿದ್ದಲ್ಲಿ ಸ್ಥಳೀಯ ಗ್ರಾಮ ನಿವಾಸಿಗಳಿಂದ ದಾನದ ರೂಪದಲ್ಲಿ ಜಾಗೆ ಪಡೆಯಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು.  

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್‌.ಮೂಗನೂರಮಠ, ಮುಖ್ಯಲೆಕ್ಕಾಧಿಕಾರಿ ಲಲಿತಾ ಲಮಾಣಿ ಇದ್ದರು.