ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ : ಹೆಬ್ಬಾರ

ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ : ಹೆಬ್ಬಾರ

ಮುಂಡಗೋಡ 20 : ಡಿಸೆಂಬರ್ 5ರಂದು ನಡೆಯುವ ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ ಎಂದು ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯಥರ್ಿ ಶಿವರಾಮ ಹೆಬ್ಬಾರ ಹೇಳಿದರು.

ಅವರು ಯಲ್ಲಾಪುರ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಅಭ್ಯಥರ್ಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಸುದ್ಧಿಗಾರರ ಜೊತೆ ಅವರು ಮಾತನಾಡುತ್ತಿದ್ದರು.

     ಬಹಳ ಜನರ ಆಶೀವರ್ಾದ ನನ್ನ ಮೇಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷರು ಇಂದಿನ ಯುದ್ಧಕ್ಕೆ ಸಾರಥ್ಯ ವಹಿಸಿದ್ದಾರೆ. ನಾವೆಲ್ಲರೂ ಒಂದಾಗಿ ಕೆಲಸ ಮಾಡುತ್ತೇವೆ ಎಂದು ಶಿವರಾಮ ಹೆಬ್ಬಾರ ಹೇಳಿದರು.

      ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಇರುವ ಬಗ್ಗೆ ಪತ್ರಕರ್ತರು ಮಾಜಿ ಶಾಸಕ ವಿ.ಎಸ್.ಪಾಟೀಲರನ್ನು ಕೇಳಿದಾಗ ಅವರು, ಬಿಜೆಪಿ ಒಂದು ಕುಟುಂಬ ಇದ್ದ ಹಾಗೆ. ಕುಟುಂಬ ಎಂದ ಮೇಲೆ ಭಿನ್ನಾಭಿಪ್ರಾಯ ಇರುವುದು ಸಹಜ. ಭಿನ್ನಾಭಿಪ್ರಾಯ ಎಲ್ಲವೂ ಬಗೆಹರಿಯಲಿದೆ, ಶಮನಗೊಳ್ಳಲಿದೆ ಎಂದರು. 

      ಹೆಬ್ಬಾರ ಬಿಜೆಪಿಗೆ ಬರಲಿ. ಆದರೆ ಹೆಬ್ಬಾರ ಬೆಂಬಲಿಗರಲ್ಲಿ ಕೆಲವರು ಬಿಜೆಪಿಗೆ ಬೇಡ ಎಂಬ ಅಭಿಪ್ರಾಯ ಬಿಜೆಪಿಯಲ್ಲಿ ವ್ಯಕ್ತವಾದ ಬಗ್ಗೆ ಪ್ರಶ್ನಿಸಿದಾಗ ಅದಕ್ಕೆ ಮಾಜಿ ಶಾಸಕ ವಿ.ಎಸ್.ಪಾಟೀಲ ಉತ್ತರಿಸುತ್ತಾ, ಹಾಗೇನಿಲ್ಲ. ಯಾರೇ ಪಕ್ಷಕ್ಕೆ ಬಂದರೂ ತೆಗೆದುಕೊಳ್ಳಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ. ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದರು.