ಫೆ. 4ರಂದು ಮೈಲಾರಲಿಂಗೇಶ್ವರ ಕಾರಣಿಕ ಮಹೋತ್ಸವ
Mylaralingeshwara Karanika Mahotsava on Feb. 4
ಹೂವಿನಹಡಗಲಿ 27: ಮೈಲಾರದಲ್ಲಿ ಭಾನುವಾರ ರಥ ಸಪ್ತಮಿಯಂದು ಕಂಕಣ ಧಾರಣೆ ಹಾಗೂ ಹಾಲು ಉಕ್ಕಿಸುವ ಸಾಂಪ್ರದಾಯಿಕ ಆಚರಣೆಯೊಂದಿಗೆ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಜಾತ್ರೆಗೆ ವಿಧ್ಯುಕ್ತ ಚಾಲನೆ ನೀಡಲಾಯಿತು.ಫೆ.4ರಂದು ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕ ಮಹೋತ್ಸವ ಜರುಗಲಿದ್ದು, ನಿಮಿತ್ತ ಧಾರ್ಮಿಕ ಕಾರ್ಯಕ್ರಮಗಳು ಚಾಲನೆ ಪಡೆದುಕೊಂಡವು.ಬೆಳಿಗ್ಗೆ ಮೈಲಾರಲಿಂಗಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿ ಕಂಕಣಧಾರಣೆ ಮಾಡಲಾಯಿತು. ಬಳಿಕ ಸಂಪ್ರದಾಯದಂತೆ ವಂಶಪಾರಂಪರ್ಯ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರು ಕಾರಣಿಕದ ಗೊರವಯ್ಯ ರಾಮಣ್ಣ ಸೇರಿದಂತೆ ಎಲ್ಲ ಬಾಬುದಾರರಿಗೆ ಕಂಕಣಧಾರಣೆ ಮಾಡಿದರು.ಬಳಿಕ ದೇವಸ್ಥಾನದ ರಂಗ ಮಂಟಪದಲ್ಲಿ ಹಾಲು ಉಕ್ಕಿಸುವ ಕಾರ್ಯಕ್ರಮ ನೆರವೇರಿತು.
ಉತ್ತರ ದಿಕ್ಕಿನೆಡೆಗೆ ಹಾಲು ಉಕ್ಕಿ ಹರಿಯಿತು. ’ಹಾಲು ಉಕ್ಕಿ ಹರಿದ ದಿಕ್ಕಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿದೆ’ ಎಂಬುದು ಭಕ್ತರ ನಂಬಿಕೆ.ಬಾಬುದಾರರ ಬಿಕ್ಕಟ್ಟು ಪರಿಹಾರ: ಮೈಲಾರ ಸುಕ್ಷೇತ್ರದಲ್ಲಿ ಧಾರ್ಮಿಕ ಸೇವೆ ನಡೆಸಿಕೊಡುವ ಗೊರವ ಸಮೂಹ ಹಾಗೂ ಬಾಬುದಾರರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸೇವೆಗಳನ್ನು ನಡೆಸಿಕೊಟ್ಟರು.’ಗೌರವ ಸಂಭಾವನೆ ಹೆಚ್ಚಳ ಇತರೆ ಬೇಡಿಕೆ ಈಡೇರಿಸದಿದ್ದರೆ ಕಾರಣಿಕ ನುಡಿ ಸೇವೆ ಸೇರಿದಂತೆ ಎಲ್ಲ ಧಾರ್ಮಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸುತ್ತೇವೆ’ ಎಂದು ಬಾಬುದಾರರು ಪಟ್ಟು ಹಿಡಿದಿದ್ದರು.ಶಾಸಕ ಕೃಷ್ಣನಾಯ್ಕ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಬಾಬುದಾರರ ಅಹವಾಲು ಆಲಿಸಿ, ಹಂತ ಹಂತವಾಗಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಬಿಕ್ಕಟ್ಟು ತಾತ್ಕಾಲಿಕ ಪರಿಹಾರ ಕಂಡಿದೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 