ಮೈಸೂರು, ಮಾರ್ಚ್ 25 : ಬಿಜೆಪಿ ಸೋಲಿಸಿ ಮತ್ತು ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿಬೇಕಾದರೆ ಎರಡು ಪಕ್ಷಗಳ ನಾಯಕರು ಮೈತ್ರಿ ಧರ್ಮ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವ ಮೊದಲು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಫೂಜೆ ಸಲ್ಲಿಸಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷವು ಮೈತ್ರಿ ಸಿದ್ಧಾಂತವನ್ನು ಪಾಲಿಸತ್ತಿದ್ದು, ಅದೇ ರೀತಿ ಕಾಂಗ್ರೆಸ್ ಕೂಡ ನಡೆದುಕೊಳ್ಳಬೇಕು ಎಂದು ಬಯಸುವುದಾಗಿ ಅವರು ಹೇಳಿದರು.
ಮಂಡ್ಯ, ಹಾಸನ ಮತ್ತು ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಕೆಲವು ಮೈತ್ರಿ ಸಿದ್ಧಾಂತದ ಸಮಸ್ಯೆಯಿದೆ ಎಂದು ಅವರು ಹೇಳಿದ್ದಾರೆ. ಅವರು ಬಿಜೆಪಿಯನ್ನು ಸೋಲಿಸಲು ಬೆಂಗಳೂರು ಉತ್ತರ ಕ್ಷೇತ್ರ ಸೇರಿದಂತೆ 8 ಕ್ಷೇತ್ರಗಳಲ್ಲಿ ಬೆಂಬಲ ನೀಡಿ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
ನಾನು ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಜಂಟಿ ಪ್ರಚಾರಕ್ಕೆ ಸಿದ್ಧನಾಗಿದ್ದೇನೆ. ಕಾಂಗ್ರೆಸ್ ಆಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಎಲ್ಲಿಗೆ ಕರೆದರೂ ಬರುತ್ತೇನೆ. ಅದೇ ರೀತಿ ಸಹಾಯ, ಸಹಕಾರವನ್ನು ಕಾಂಗ್ರೆಸ್ ಪಕ್ಷದ ನಾಯಕರಿಂದಲೂ ಬಯಸುವುದಾಗಿ ಅವರು ಹೇಳಿದರು.