ಮೈಸೂರು ಜಿಲ್ಲೆ ಶೀಘ್ರ ಆರೆಂಜ್ ಝೋನ್‌ಗೆ: ಎಸ್.ಟಿ.ಸೋಮಶೇಖರ್
ಮೈಸೂರು, ಮೇ 7,ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ಅವರಲ್ಲಿ ಮೃಗಾಲಯಕ್ಕೆ ದೇಣಿಗೆ ನೀಡುವಂತೆ ತಾವು ಮಾಡಿದ ಮನವಿಗೆ ಸ್ಪಂದಿಸಿ 84 ಲಕ್ಷ ರೂ. ಸಂಗ್ರಹಿಸಿ ಕೊಡುಗೆಯಾಗಿ ನೀಡಿದ್ದಾರೆ. ಇದು ಅವರ ಸಮಾಜಮುಖಿ ಕಾರ್ಯವನ್ನು ತೋರಿಸುತ್ತದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.ಅಮೆರಿಕದ ಅಕ್ಕ ಸಂಸ್ಥೆಯ ಅಧ್ಯಕ್ಷ ಅಮರನಾಥ ಅವರೊಂದಿಗೆ ಮಾತನಾಡಿದ್ದೇನೆ. ಅವರೂ ದೇಣಿಗೆ ಬಗ್ಗೆ ಮಾಹಿತಿ ನೀಡಿದ್ದೇನೆ. ಅವರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಅಕ್ಕ ಸಮ್ಮೇಳನ ನಡೆಯದಿರುವುದರಿಂದ ಸಹಾಯಮಾಡುವಂತೆ ಕೇಳಿಕೊಂಡಿದ್ದೇನೆ. ಶೀಘ್ರ ಆರ್ಥಿಕ ಸಹಾಯ ಮಾಡಲಿದ್ದಾರೆ ಎಂದು ಸಚಿವರು ತಿಳಿಸಿದರು.
ಬಳಿಕ ಮಾತನಾಡಿದ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಮಾತನಾಡಿ, ತಾವು ಮೈಸೂರಿಗೆ ಭೇಟಿ ನೀಡುವುದಾಗಿ ಉಸ್ತುವಾರಿ ಸಚಿವ ಸೋಮಶೇಖರ್ ಅವರು ಮೃಗಾಲಯಕ್ಕೆ ಆರ್ಥಿಕ ಸಹಾಯ ಮಾಡುವಂತೆ ಕೇಳಿಕೊಂಡಾಗ ಸಂತೋಷದಿಂದ ಒಪ್ಪಿದೆ. ನನ್ನ ಕ್ಷೇತ್ರದ ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು ಸಹ ಕೊಡುಗೆ ನೀಡಿದ್ದಾರೆ. ಹೀಗಾಗಿ 84 ಲಕ್ಷ ರೂ. ಸಂಗ್ರಹವಾಗಿದೆ ಎಂದು ತಿಳಿಸಿದರು. ಮನುಷ್ಯರಿಗೆ ಹಸಿವಾದರೆ ಹೇಳಿಕೊಳ್ಳಬಹುದು. ಆದರೆ, ಪ್ರಾಣಿಗಳಿಗೆ ಅದು ಸಾಧ್ಯವಿಲ್ಲ. ಹೀಗಾಗಿ ಅವುಗಳ ಹಸಿವು ನೀಗಿಸುವುದು ನಮ್ಮ ಕರ್ತವ್ಯ ಎಂದು ಸಚಿವ ಬಸವರಾಜು ಅವರು ಅಭಿಪ್ರಾಯಪಟ್ಟರು.
ಸಂಸದರಾದ ಪ್ರತಾಪ್ ಸಿಂಹ, ಹಿರಿಯ ಶಾಸಕ ಎಸ್.ಎ.ರಾಮದಾಸ್ ಇತರ ಮುಖಂಡರು ಇದ್ದರು. ರೈತರ ಅನುಕೂಲಕ್ಕಾಗಿ ಗಡಿಭಾಗ ಸಡಿಲ90 ಪಾಸಿಟಿವ್ ಪ್ರಕರಣದಿಂದ 7ಕ್ಕೆ ಬಂದಿದೆ. ರೈತರಿಗೆ ಬೆಳೆದ ಬೆಳೆ ಮಾರಾಟಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ಹೂವು, ತರಕಾರಿ ಹಾಗೂ ಇನ್ನಿತರ ಉತ್ಪನ್ನಗಳ ಮಾರಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಗಡಿಭಾಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇನ್ನು ಕೆಲವು ಕಡೆಗಳಲ್ಲಿ ಯಾವುದಕ್ಕೆ ಅವಕಾಶ ಕೊಡಬೇಕು ಎಂಬುದು ಇಂದು ನಿರ್ಧಾರವಾಗಲಿದೆ ಎಂದು ತಿಳಿಸಿದರು.
ಶೀಘ್ರ ಆರೆಂಜ್ ಝೋನ್ ಇನ್ನು ವಾರದಲ್ಲೇ ಮೈಸೂರು ಕೊರೋನಾ ಮುಕ್ತವಾಗುವ ಸಾಧ್ಯತೆ ಇದೆ. ಈಗಾಗಲೇ ಕೊರೋನಾ ಪಾಸಿಟಿವ್ ಪ್ರಕರಣ 7ಕ್ಕೆ ಬಂದಿದ್ದರಿಂದ ಆದಷ್ಟು ಬೇಗ ಶೂನ್ಯಕ್ಕೆ ಇಳಿಯಲಿದೆ. ಹೀಗಾಗಿ ರೆಡ್ ಝೋನ್ ನಿಂದ ಆರೆಂಜ್ ಝೋನ್ ಆಗಿ ಪರಿವರ್ತಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಶೀಘ್ರ ನಿರ್ಧಾರ ಹೊರಬೀಳಲಿದೆ. ಮುಂದೆ ಪರಿಸ್ಥಿತಿ ನೋಡಿಕೊಂಡು ಗ್ರೀನ್ ಝೋನ್ ಗೆ ತರುವ ಬಗ್ಗೆ ತೀರ್ಮಾನಿಸ ಲಾಗುವುದು ಎಂದು ಸಚಿವ ಸೋಮಶೇಖರ್ ತಿಳಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 