ಕಂಪ್ಲಿಯಲ್ಲಿ ನರೇಗಾ ಸಿಬ್ಬಂದಿ ಅಸಹಕಾರ ಚುಳುವಳಿ
NAREGA staff non-cooperation movement in Kampli
ಕಂಪ್ಲಿ 08: ರಾಜ್ಯಾದ್ಯಂತ ನರೇಗಾ ಯೋಜನೆಯಡಿ ಹೊರ ಸಂಪನ್ಮೂಲದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ 6 ತಿಂಗಳ ಬಾಕಿ ವೇತನ ನೀಡಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಮಹಾತ್ಮಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರಾಗಿ ಪಟ್ಟಣದ ತಾಲೂಕು ಪಂಚಾಯಿತಿ ಕಛೇರಿ ಮುಂಭಾಗದಲ್ಲಿ ಅಸಹಕಾರ ಚಳುವಳಿ ಮಂಗಳವಾರ ನಡೆಸಿದರು.
ನಂತರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹನುಮೇಶ ಮಾತನಾಡಿ, ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದೇವೆ. ಕಳೆದ 6 ತಿಂಗಳಿಂದ ವೇತನ ಇಲ್ಲದ ಪರಿಣಾಮ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ಸಾಲ ಸೂಲ ಮಾಡಿ ಜೀವನ ನಡೆಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಸಕಾಲದಲ್ಲಿ ವೇತನ ಪಾವತಿಯಾಗದೇ ಇರುವುದರಿಂದ ಆರ್ಥಿಕ ಸಂಕಷ್ಟವಾಗಿದೆ. ಈಗಾಗಲೇ ಕೇಂದ್ರ ಸರ್ಕಾರದಿಂದ ಅನುದಾನ ಬಂದಿದ್ದು, ರಾಜ್ಯ ಸರ್ಕಾರದಿಂದಲೂ ಸಹ ಅನುದಾನ ಬಿಡುಗಡೆಯಾಗಿದೆ. ಆದರೆ, ಜಿಲ್ಲಾ ಕೇಂದ್ರಕ್ಕೆ ಅನುದಾನ ಬಿಡುಗಡೆಯಾಗಿದೆ ಎಂಬ ಮಾಹಿತಿ ನೀಡಿರುತ್ತಾರೆ. ಆದರೆ, ಹೊಸ ತಂತ್ರಾಂಶದಲ್ಲಿ ವೇತನ ಪಾವತಿ ಮಾಡಲು ತಾಂತ್ರಿಕ ಸಮಸ್ಯೆಯಿಂದ ವೇತನ ಪಾವತಿ ವಿಳಂಬವಾಗುತ್ತಿದೆ. ಆದ್ದರಿಂದ ವೇತನ ಪಾವತಿಯಾಗಬೇಕು. ವೇತನ ಪಾವತಿಯಾಗುವವರೆಗೂ ಅಸಹಕಾರ ಚಳುವಳಿ ನಡೆಸಲಾಗುವುದು. ಕೂಡಲೇ ತಂತ್ರಾಂಶದ ಸಮಸ್ಯೆ ಬಗೆಹರಿಸಿ, ವೇತನ ಪಾವತಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಸಂಗಮೇಶ, ಟಿಎಇ ಸಿಬ್ಬಂದಿಗಳಾದ ತಿಪ್ಪೇಶ್, ಲೋಕೇಶ, ಅಂಜಿನೇಯ್ಯ, ಶಿಲ್ಪ, ಹೊನ್ನೂರಮ್ಮ ರಂಜಿನಿ, ಮಂಜುಳಾ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 