ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿಗೆ ಎನ್‌ಡಿಆರ್‌ಎಫ್‌ ಸೂಚನೆ

ಬೆಂಗಳೂರು, ಏ.7,ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲು ನೇರವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಅಖಾಡಕ್ಕೆ ಇಳಿದಿದೆ.ಲಾಕ್‌ಡೌನ್‌ ಸಂಪೂರ್ಣವಾಗಿ ಯಶಸ್ವಿಗೊಳಿಸಲು ಎನ್‌ಡಿಆರ್‌ಎಫ್‌ ತಂಡ ಪೊಲೀಸರಿಗೆ ಪೂರ್ಣ ಅನುಮತಿ ನೀಡಿದೆ. ಈ ಸಂಬಂಧ ರಾಜ್ಯದ ಗೃಹ ಕಾರ್ಯದರ್ಶಿ ಮತ್ತು ರಾಜ್ಯಪೊಲೀಸ್ ಮಹಾ ನಿರ್ದೇಶಕರಿಗೆ ಪೂರ್ಣ ಅಧಿಕಾರ ನೀಡಿ ಆದೇಶ ಹೊರಡಿಸಿದೆ.ರಾಜ್ಯ ಡಿಸಾಸ್ಟರ್ ಮ್ಯಾನೇಜಮೆಂಟ್' ಉಪಾಧ್ಯಕ್ಷ ಆರ್ ಅಶೋಕ್ ಅವರ ಹೆಸರಿನಲ್ಲಿ ಈ ಆದೇಶ ಹೊರಡಿಸಲಾಗಿದ್ದು, ಲಾಕ್ ಡೌನ್ ವೇಳೆ ನಿಯಮ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ2005 ರಡಿ ಪ್ರಕರಣ ದಾಖಲಿಸುವಂತೆಯೂ ಠಾಣಾಧಿಕಾರಿಗಳಿಗೆ ಸೂಚಿಸಲಾಗಿದೆ.  ಲಾಕ್‌ಡೌನ್‌ ಸಂಪೂರ್ಣವಾಗಿ ಜಾರಿಗೊಳಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್‌ ಅವರಿಗೆ ರಾಜ್ಯ ವಿಪತ್ತು ನಿರ್ವಹಣಾ ಸಮಿತಿ ಉಪಾಧ್ಯಕ್ಷ ಆರ್ ಅಶೋಕ್ ಸೂಚನೆ ನೀಡಿದ್ದಾರೆ.