ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಎಸ್ಎಫ್ಐ ಸ್ವಾಗತ
NEET Question Paper Leak Case: SFI Welcomes Union Education Minister's Resignation
ಹಾವೇರಿ 27: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದನ್ನು ಸ್ವಾಗತಿಸಿ ,ವಿದ್ಯಾರ್ಥಿ-ಯುವಜನರ ಐಕ್ಯ ಹೋರಾಟಕ್ಕೆ ಸಂದ ಜಯ ಎಂದು ಎಸ್ಎಫ್ಐ ಕಾರ್ಯಕರ್ತರು ಹಾವೇರಿ ವಿಶ್ವವಿದ್ಯಾಲಯದ ಎದುರು ಸಂಭ್ರಮಾಚರಣೆ ನಡೆಸಿದರು. ಈ ವೇಳೆ ಪರಸ್ಪರ ಸಿಹಿ ಹಂಚಿಕೊಂಡು, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಮೌನಾಚರಣೆ ಮೂಲಕ ಗೌರವ ಸಲ್ಲಿಸಿದರು.
ಎಸ್ಎಫ್ಐ ಹಾವೇರಿ ಘಟಕದ ಅಧ್ಯಕ್ಷೆ ಪೂಜಾ ಬಾಕಿ ಮಾತನಾಡಿ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಜನರ ಸಂಘಟಿತ ಹೋರಾಟದ ಫಲವಾಗಿದೆ. ಈ ಚಳವಳಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಮತ್ತು ಯುವಜನರು ಉಪವಾಸ ಸತ್ಯಾಗ್ರಹ, ಪ್ರತಿಭಟನೆ ಸೇರಿದಂತೆ ವಿವಿಧ ರೀತಿಯ ಹೋರಾಟಗಳನ್ನು ನಡೆಸಿದ್ದು, ಅವರ ಹೋರಾಟಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೇಶದಾದ್ಯಂತ ಮೊದಲಿನಿಂದಲೂ ಎಸ್ಎಫ್ಐ ಹೋರಾಟ ನಡೆಸುತ್ತಿದೆ. ಹೋರಾಟದ ವೇಳೆ ಹಲವಾರು ಕಾರ್ಯಕರ್ತರು ಬಂಧನ, ಪೊಲೀಸ್ ಪ್ರಕರಣಗಳು ಹಾಗೂ ವಿವಿಧ ರೀತಿಯ ಒತ್ತಡಗಳನ್ನು ಎದುರಿಸಿದ್ದರೂ, ಶಿಕ್ಷಣದಲ್ಲಿ ಪಾರದರ್ಶಕತೆ ಮತ್ತು ನ್ಯಾಯಕ್ಕಾಗಿ ಸಂಘಟನೆ ತನ್ನ ಹೋರಾಟವನ್ನು ಮುಂದುವರಿಸಿದೆ ಎಂದು ತಿಳಿಸಿದರು.
ಹಾವೇರಿ ಘಟಕದ ಉಪಾಧ್ಯಕ್ಷ ಬಸವರಾಜ ಎಸ್. ಮಾತನಾಡಿ, ನೀಟ್ ಪರೀಕ್ಷೆ ಅಕ್ರಮದಿಂದ ಜಿಲ್ಲೆಯ ಹಾನಗಲ್ನ ವಿದ್ಯಾರ್ಥಿನಿ ಬಿಂದುಶ್ರೀ ಸೇರಿದಂತೆ ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ಕುರಿತು ವಿದ್ಯಾರ್ಥಿನಿ ಮತ್ತು ಅವರ ಕುಟುಂಬದೊಂದಿಗೆ ಎಸ್ಎಫ್ಐ ನಿಲ್ಲಲಿದ್ದು, ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದರು.
ದೇಶಾದ್ಯಂತ ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳು ನಡೆದರೂ, ವಿದ್ಯಾರ್ಥಿ ಚಳವಳಿಗಳನ್ನು ತಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಭ್ರಷ್ಟಾಚಾರ, ಕೇಂದ್ರೀಕರಣ ಹಾಗೂ ವಾಣಿಜ್ಯೀಕರಣದ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದರು.
ಎಸ್ಎಫ್ಐ ಹಾವೇರಿ ಘಟಕದ ಕಾರ್ಯದರ್ಶಿ ಶಂಭುಲಿಂಗ ಸವದತ್ತಿ ಮಾತನಾಡಿ, ಸಚಿವರ ರಾಜೀನಾಮೆ ಹೋರಾಟದ ಮೊದಲ ಗೆಲುವು ಮಾತ್ರ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸುಧಾರಣೆ ಸೇರಿದಂತೆ ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ಆಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್ಎಫ್ಐ ಹಾವೇರಿ ಘಟಕದ ಉಪಾಧ್ಯಕ್ಷ ಪರಶುರಾಮ ಎಸ್., ಕಾಂತೇಶ್ ಹಳ್ಳೇರ, ಸಹ ಕಾರ್ಯದರ್ಶಿ ಪ್ರವೀಣ್ ಮಟ್ಟೇರ, ಲೋಕೇಶ್ ಕೆಂಚಣ್ಣನವರ, ಶರಣ ಮಲ್ಲಕ್ಕನವರ, ಶಶಾಂಕ್ ಭೋಗಾವಿ, ಶಿವರಾಜ ಲಮಾಣಿ, ಹಸನಸಾಬ್, ಅರುಣ್ ಜೋಗೇರ, ನಿಂಗರಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 