ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ: ಸಚಿವರುಗಳ ರಾಜೀನಾಮೆಗೆ ಜ್ಯೋತಿ ಒತ್ತಾಯ
NEET exam question paper leak: Jyoti demands resignation of ministers
ಲೋಕದರ್ಶನ ವರದಿ
ಕೊಪ್ಪಳ 23: ಮೇ 3 ರಂದು ದೇಶಾದ್ಯಂತ ನಡೆದ ನೀಟ್ ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ (ಲೀಕ್) ಕುರಿತು ತನಿಖೆ ನಡೆಸಿ, ಕೇಂದ್ರ ಶಿಕ್ಷಣ ಸಚಿವರು ಹಾಗೂ ಕೇಂದ್ರ ಗೃಹ ಸಚಿವರ ರಾಜೀನಾಮೆ ಪಡೆಯುವಂತೆ ಒತ್ತಾಯಿಸಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಷ್ಟ್ರಪತಿಗಳಿಗೆ ಹಲವು ಒತ್ತಾಯಗಳನ್ನು ಮಾಡಿದ್ದು, ನೀಟ್ ಪರೀಕ್ಷೆಯನ್ನು ರಾಜ್ಯಗಳಿಗೆ ಮರಳಿ ನೀಡುವಂತೆ ಒತ್ತಾಯಿಸಿದ್ದಾರೆ.
ದೇಶದ ಲಕ್ಷಾಂತರ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸಿಗೆ ಆಧಾರವಾಗಿರುವ ನೀಟ್ ಪರೀಕ್ಷೆಯಲ್ಲಿ ಇತ್ತೀಚೆಗೆ ನಡೆದಿರುವ ಬೃಹತ್ ಪ್ರಮಾಣದ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಇಡೀ ದೇಶವನ್ನೇ ತಲ್ಲಣಗೊಳಿಸಿವೆ. ಹಗಲಿರುಳು ಕಷ್ಟಪಟ್ಟು ಓದಿದ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯ ಇಂದು ಬೀದಿಗೆ ಬಂದು ನಿಲ್ಲುವಂತಾಗಿದೆ.
ಜವಾಬ್ದಾರಿ ಮತ್ತು ರಾಜೀನಾಮೆ: ದೇಶದ ಶಿಕ್ಷಣ ವ್ಯವಸ್ಥೆಯ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಮತ್ತು ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈ ಬೃಹತ್ ಅಕ್ರಮದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ಹಾಗೂ ದೇಶದ ಭದ್ರತೆ ಮತ್ತು ತನಿಖಾ ವೈಫಲ್ಯದ ಹೊಣೆ ಹೊತ್ತು ಕೇಂದ್ರ ಗೃಹ ಸಚಿವರು ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಇಲ್ಲವೇ ತಾವುಗಳು ಅವರ ರಾಜೀನಾಮೆಯನ್ನು ಪಡೆದುಕೊಳ್ಳಬೇಕು.
ಉನ್ನತ ಮಟ್ಟದ ತನಿಖೆ: ಈ ಹಗರಣದ ಹಿಂದೆ ದೊಡ್ಡ ಜಾಲವೇ ಸಕ್ರಿಯವಾಗಿದ್ದು, ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ಉನ್ನತ ಮಟ್ಟದ ತನಿಖೆ ನಡೆಯಬೇಕು.
ವಿದ್ಯಾರ್ಥಿಗಳಿಗೆ ನ್ಯಾಯ: ವಂಚನೆಗೆ ಒಳಗಾದ ಲಕ್ಷಾಂತರ ಅರ್ಹ ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಸಿಗುವಂತಾಗಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ದೇಶದ ಭವಿಷ್ಯವಾಗಿರುವ ಯುವ ಪೀಳಿಗೆಗೆ ಮತ್ತು ಭವಿಷ್ಯದ ವೈದ್ಯರಿಗೆ ನ್ಯಾಯ ಒದಗಿಸಲು, ತಾವುಗಳು ಈ ವಿಷಯದಲ್ಲಿ ತಕ್ಷಣವೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವಿಶಾಲಾಕ್ಷಿ ತಾವರಗೇರಿ, ಮುಖಂಡರಾದ ಸುಮಂಗಲಾ ನಾಯಕ, ಚನ್ನಮ್ಮ ಮುಳಗುಂದ ಇತರರು ಇದ್ದರು, ತಹಶೀಲ್ದಾರರು, ಕೊಪ್ಪಳ ಇವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಅರ್ಿಸಲಾಯಿತು, ತಹಶೀಲ್ದಾರ ಪರವಾಗಿ ಗ್ರೇಡ್ 2 ತಹಶೀಲ್ದಾರ ಗವಿಸಿದ್ದಪ್ಪ ಮನ್ನೂರ ಮನವಿ ಸ್ವೀಕರಿಸಿದರು.
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ 