ಹೈದರಾಬಾದ್, ಡಿ 8 : ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಏಳು ಸದಸ್ಯರ ತಂಡ ನವದೆಹಲಿಯನ್ನು ತಲುಪಿದ್ದು, ಭಾನುವಾರ ಇತ್ತೀಚೆಗೆ ಸಾಮೂಹಿಕ ಅತ್ಯಾಚಾರ ಹಾಗೂ ಹಲ್ಲೆಗೊಳಗಾದ ಪಶುವೈದ್ಯೆ ದಿಶಾ ಕುಟುಂಬ ಸದಸ್ಯರನ್ನು ಭೇಟಿಯಾಗುವ ಸಾಧ್ಯತೆಯಿದೆ. ಪ್ರಸ್ತುತ ಹೈದರಾಬಾದ್ ನ ಸರ್ಧಾರ್ ವಲ್ಲಭಬಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿರುವ ಆಯೋಗದ ಸದಸ್ಯರು ಎನ್ ಕೌಂಟರ್ ನಲ್ಲಿ ಗಾಯಗೊಂಡಿರುವ ಇಬ್ಬರು ಪೊಲೀಸರನ್ನು ಪ್ರಶ್ನಿಸಲಿದ್ದಾರೆ ಎನ್ನಲಾಗಿದೆ. ದಿಶಾ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಸಂಬಂಧ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಈಗಾಗಲೇ ಅವರು ಮಹಬೂಬನಗರ ಆಸ್ಪತ್ರೆಯಲ್ಲಿ ಇರಿಸಲಾಗಿರುವ ಮೃತದೇಹಗಳನ್ನು ಪರೀಕ್ಷಿಸಿದ್ದಾರೆ. ದಿಶಾಳನ್ನು ಹತ್ಯೆ ಮಾಡಲಾಗಿದೆ ಎನ್ನಲಾದ ಸ್ಥಳವನ್ನು ಕೂಡ ಪರಿಶೀಲಿಸಿದ್ದಾರೆ.