ನರೇಗಾ ಕೆಲಸದಲ್ಲಿ ಕೂಲಿಕಾರರು ಎನ್‌ಎಂಎಂಎಸ್ ಹಾಜರಾತಿ ಕಡ್ಡಾಯ: ಹನಮಂತಗೌಡ ಪೊಲೀಸ್ ಪಾಟೀಲ್
ಯಲಬುರ್ಗಾ: ಇಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತುಮ್ಮರಗುದ್ದಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಮಾನ್ಯ ಸಹಾಯಕ ನಿರ್ದೆಶಕರಾದ ಹನಮಂತಗೌಡ ಪೊಲೀಸ್ ಪಾಟೀಲ್ ಭೇಟಿ ನೀಡಿ ಕೂಲಿಕಾರರ ಎನ್‌ಎಂಎಂಎಸ್ ಹಾಜರಾತಿಯನ್ನು ಪರೀಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಬೇಸಿಗೆ ಸಮಯದಲ್ಲಿ ನಿರಂತರವಾಗಿ ಕೆಲಸ ನೀಡಲಾಗುವುದು. ಈ ಬಾರಿ ನರೇಗಾ ಕೂಲಿಮೊತ್ತ 370 ರೂಪಾಯಿಗೆ ಹೆಚ್ಚಳವಾಗಿದೆ. ಸರಿಯಾಗಿ ಅಳತೆಗೆ ತಕ್ಕಂತೆ ಕೆಲಸ ಮಾಡಿ ಪೂರ್ಣ ಮೊತ್ತದ ಕೂಲಿ ಕಡೆಯಿರಿ. ಪ್ರತಿಯೊಬ್ಬರೂ ಎನ್‌ಎಂಎಂಎಸ್ ಹಾಜರಾತಿ ಹಾಕುವುದು ಕಡ್ಡಾಯ ಎಂದು ಸಲಹೆ ನೀಡಿದರು. ಈ ವೇಳೆ ತಾಂತ್ರಿಕ ಸಂಯೋಜಕರಾದ ಸಂತೋಷ ನಂದಾಪುರ, ಪಿಡಿಒರಾದ ರವಿಕುಮಾರ, ಡಿಇಒ ರಮೇಶ, ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.