ನವದೆಹಲಿ, ಫೆ 14 : 1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ ಮತ್ತು ಹೋಳಿ ರಜೆಯ ನಂತರ ಅವರ ಅರ್ಜಿಯನ್ನು ಮತ್ತೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. "ಹೋಳಿ ರಜೆಯ ನಂತರ ಸಜ್ಜನ್ ಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಆಲಿಸಲಾಗುವುದು” ಎಂದು ಸಿಜೆಐ ಎಸ್ ಎ ಬೊಂಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ ಹೇಳಿದೆ. ನ್ಯಾಯಾಲಯಕ್ಕೆ ವೈದ್ಯಕೀಯ ವರದಿಯನ್ನು ಹಸ್ತಾಂತರಿಸುವ ಸಜ್ಜನ್ ಕುಮಾರ್ ಪರ ವಕೀಲ ವಿಕಾಸ್ ಸಿಂಗ್, ಜೈಲಿನಲ್ಲಿ ಕುಮಾರ್ 13 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು. 1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಕುಮಾರ್ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.