ಈ ವರ್ಷ ನಿಮ್ಜೊತೆ ಹುಟ್ದಬ್ಬ ಆಚರಣೆ ಇಲ್ಲ, ಬೈಕೋಬೇಡಿ: ರಾಧಿಕಾ ಪಂಡಿತ್
ಬೆಂಗಳೂರು, ಮಾ 07, ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಇಂದು ತಮ್ಮ 36ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇನ್ಸ್ಟಾದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ವಿಡಿಯೋ ಶೇರ್ ಮಾಡಿರುವ ರಾಧಿಕಾ, “ಪ್ರತಿ ವರ್ಷ ನನ್ನ ಹುಟ್ಟುಹಬ್ಬದ ದಿನ ಬೇರೆ ಜಾಗಗಳಿಂದ, ಬೇರೆ ಊರುಗಳಿಂದ ನನ್ನನ್ನು ಭೇಟಿ ಮಾಡಿ ವಿಶ್ ಮಾಡಲು ಬರುತ್ತೀರಾ ಎಂದು ನನಗೆ ಗೊತ್ತು. ಕಳೆದ ವರ್ಷ ಕೂಡ ಮಿಸ್ ಆಯ್ತು. ಈ ವರ್ಷ ದಯವಿಟ್ಟು ಯಾರು ಬೇಜಾರು ಮಾಡಿಕೊಳ್ಳಬೇಡಿ, ಬೈಕೋಬೇಡಿ” ಎಂದಿದ್ದಾರೆ. ಈ ವರ್ಷ ಕೂಡ ನಾನು ನನ್ನ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಏಕೆಂದರೆ ನನಗೆ ಇಬ್ಬರು ಪುಟಾಣಿ ಮಕ್ಕಳಿದ್ದಾರೆ. ಹಾಗಾಗಿ ಈ ವರ್ಷ ಹುಟ್ಟುಹಬ್ಬ ಆಚರಿಸುವುದು ಸ್ವಲ್ಪ ಕಷ್ಟ ಎಂದಿದ್ದಾರೆ. ಇದೇ ವೇಳೆ ನೀವು ಮಾಡುತ್ತಿರುವ ಮೆಸೇಜ್ಗಳು ಹಾಗೂ ಪ್ರೀತಿಯಿಂದ ಮಾಡುತ್ತಿರುವ ಕೆಲಸಗಳನ್ನು ನಾನು ಸೋಶಿಯಲ್ ಮೀಡಿಯಾದಲ್ಲಿ ನೋಡುತ್ತಿದ್ದೇನೆ. ಎಲ್ಲಾ ಮೆಸೇಜ್ಗಳನ್ನು ಓದುತ್ತಿದ್ದೇನೆ, ಹಾಗೆಯೇ ರಿಪ್ಲೈ ಕೂಡ ಮಾಡುತ್ತೇನೆ. ನನಗೂ ಬೇಜಾರು ಆಗುತ್ತಿದೆ. ಯಾಕೆಂದರೆ ನನ್ನ ಹುಟ್ಟುಹಬ್ಬ ನಿಮ್ಮ ಜೊತೆ ಆಚರಿಸಿಲ್ಲ ಎಂದರೆ ಏನೋ ಅಪೂರ್ಣ ಎಂದು ಅನಿಸುತ್ತೆ. ಕಳೆದ ವರ್ಷ ಕೂಡ ಹುಟ್ಟುಹಬ್ಬ ಆಚರಿಸೋಕೆ ಆಗಿಲ್ಲ. ಮುಂದಿನ ವರ್ಷ ಭೇಟಿಯಾಗಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸೋಣ ಎಂದು ತಿಳಿಸಿದ್ದಾರೆ. ನಾನು ಈ ವಿಡಿಯೋ ಏಕೆ ಮಾಡುತ್ತಿದ್ದೇನೆ ಎಂದರೆ, ನನ್ನ ಹುಟ್ಟುಹಬ್ಬದಂದು ದೂರದ ಊರಿನಿಂದ ಅಭಿಮಾನಿಗಳು ಬರುತ್ತಾರೆ. ಈ ಬಾರಿ ಕೂಡ ಅವರು ಬಂದು ನಿರಾಸೆ ಆಗುವುದು ನನಗೆ ಇಷ್ಟ ಇಲ್ಲ. ಹಾಗಾಗಿ ನಾನು ಈ ವಿಡಿಯೋ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡುತ್ತಿದ್ದೇನೆ. ನಿಮ್ಮಲ್ಲರ ಪ್ರೀತಿ ಹಾಗೂ ಆಶೀರ್ವಾದ ನನ್ನ ಕುಟುಂಬಕ್ಕೆ ಸದಾ ಹೀಗೆ ಇರಲಿ. ಆದಷ್ಟು ಬೇಗ ಸಿಗೋಣ ಎಂದು ರಾಧಿಕಾ ಹೇಳಿಕೊಂಡಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 