ಪ್ರವಾಸಿ ತಾಣಗಳಲ್ಲಿ ಭದ್ರತಾ ಕ್ರಮಗಳನ್ನು ಪರಿಶೀಲಿಸಲು ಮೈಸೂರಿಗೆ ಎನ್‍ಎಸ್ ಜಿ ಆಗಮನ
ಮೈಸೂರು, ಜ 20, ಪ್ರವಾಸಿ ಕೇಂದ್ರವಾದ ಅರಮನೆ ನಗರಿಯಲ್ಲಿ ಭದ್ರತಾ ಕ್ರಮಗಳನ್ನು ಪರಿಶೀಲಿಸಲು ಹಾಗೂ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧತೆ ಬಲಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಭದ್ರತಾ ಪಡೆ(ಎನ್‍ಎಸ್ ಜಿ)ಯ 100 ಸದಸ್ಯರ ತಂಡ ಸೋಮವಾರ ನಗರಕ್ಕೆ ಆಗಮಿಸಿದೆ. ಮೈಸೂರು ಅರಮನೆಯ ವಾರ್ಷಿಕ ನಿರ್ವಹಣೆ ಕಾರ್ಯವನ್ನು ಸೋಮವಾರ ಕೈಗೆತ್ತಿಕೊಳ್ಳಲಾಗಿದ್ದು, ಅರಮನೆಯ ಭದ್ರತೆ ಹೆಚ್ಚಿಸಲು ಎನ್‍ಎಸ್ ಜಿ ಸಲಹೆಗಳು ಮತ್ತು ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ. ಎನ್‍ಎಸ್ ಜಿ ಕಮಾಂಡೋಗಳು ಮೈಸೂರು ವಿಮಾನ ನಿಲ್ದಾಣಕ್ಕೂ ಭೇಟಿ ನೀಡುವ ಸಾಧ್ಯತೆ ಇದೆ.
ಎರಡು ದಿನಗಳ ಹಿಂದೆ ಕಮಾಂಡೋಗಳ ತಂಡ ಮೈಸೂರು ತಲುಪಿದ್ದು ಅರಮನೆ ಮಂಡಳಿಯ ಇಂಜನಿಯರುಗಳೊಂದಿಗೆ ಸಂವಾದ ನಡೆಸಿವೆ ಎಂದು ಅರಮನೆ ಮಂಡಳಿ ಮೂಲಗಳು ತಿಳಿಸಿವೆ. ಭಯೋತ್ಪಾದಕ ಚಟುವಟಿಕೆಗಳು ಎದುರಾದರೆ ಅವನ್ನು ತಡೆಯಲು ಕೆಲ ಪ್ರಮುಖ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸರ್ಕಾರಿ ಇಲಾಖೆಗಳು ಹಾಗೂ ಸ್ಥಳೀಯ ಆಡಳಿತಕ್ಕೆ ತರಬೇತಿ ನೀಡಲು ಎನ್‍ಎಸ್ ಜಿ ಕಮಾಂಡೊ ತಂಡ ಮೈಸೂರಿನಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 