ಹರಗಿನಡೋಣಿಯಲ್ಲಿ ಎನ್‌ಎಸ್‌ಎಸ್ ಸಪ್ತಾಹ ಆಚರಣೆ
NSS Week Celebration in Haraginadoni
ಬಳ್ಳಾರಿ 08: ಜಿಲ್ಲೆಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ರಾಷ್ಟ್ರೀಯ ಸ್ವಯಂಸೇವಾ ಯೋಜನೆ (ಎನ್‌ಎಸ್‌ಎಸ್) ಸಪ್ತಾಹವನ್ನು ಹರಗಿನಡೋಣಿ ಗ್ರಾಮದ ಶ್ರೀ ಬುಗ್ಗ ಸಿದ್ದಲಿಂಗೇಶ್ವರ ಶಾಲೆಯಲ್ಲಿ ಉದ್ಘಾಟಿಸಲಾಯಿತು.ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಎಚ್.ಎಸ್.ಕೆ. ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
ಶಾಲೆಯ ಶಿಕ್ಷಕಿ ಶ್ರೀಮತಿ ನಿರ್ಮಲಾ ಹಾಗೂ ಸಹ ಶಿಕ್ಷಕರು, ಗ್ರಾಮಸ್ಥ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಮಹಾತ್ಮ ಗಾಂಧೀಜಿಯವರ ಅಹಿಂಸೆ, ಸಹನೆ ಮತ್ತು ಸತ್ಯದ ತತ್ವಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜೊತೆಗೆ ಸ್ವಚ್ಛತೆಯ ಮಹತ್ವವನ್ನು ಅರಿತು ಸಮಾಜದಲ್ಲಿ ಉತ್ತಮ ಸಂದೇಶವನ್ನು ಹರಡಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದ ನಿರೂಪಣೆಯನ್ನು ಎಚ್.ಎಸ್.ಕೆ. ಪಾಲಿಟೆಕ್ನಿಕ್ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ರಾಜೇಶ್ ಕುಮಾರ್ ಜೆ.ಎಂ ಅವರು ನಡೆಸಿಕೊಟ್ಟರು. ವಂದನಾರೆ್ಣಯನ್ನು ಸಮನ್ವಯ ಅಧಿಕಾರಿ ಕೆ. ಪಂಪನಗೌಡರು ಸಲ್ಲಿಸಿದರು.
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು 