ಎನ್‌ಎಸ್‌ಎಸ್ ಶಿಬಿರ: ಜಾನುವಾರಗಳ ಉಚಿತ ತಪಾಸಣೆ
NSS camp: Free inspection of livestock
ಲೋಕದರ್ಶನ ವರದಿ
ಜಮಖಂಡಿ 27: ತಾಲ್ಲೂಕಿನ ಮುತ್ತೂರ ಗ್ರಾಮದಲ್ಲಿ ಬಿಎಲ್‌ಡಿಇ ಸಂಸ್ಥೆಯ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ಜರುಗುತ್ತಿರುವ ಎನ್‌ಎಸ್‌ಎಸ್ ವಿಶೇಷ ಸೇವಾ ಶಿಬಿರದ ಅಂಗವಾಗಿ ಜಾನುವಾರಗಳ ಉಚಿತ ತಪಾಸಣೆ ಮತ್ತು ಉಪಚಾರ ಶಿಬಿರ ಯಶಸ್ವಿಯಾಗಿ ನಡೆಯಿತು.
ತಾಲ್ಲೂಕಿನ ತುಂಗಳ ಗ್ರಾಮದ ದಿ.ಬಾಲವ್ವ ಪಾಂಡಪ್ಪ ಗಿರಡ್ಡಿ ಅವರ ಸ್ಮರಣಾರ್ಥ ಬಸವಜ್ಯೋತಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ಪ್ರಾಯೋಜಿಸಿದ್ದ ಶಿಬಿರಕ್ಕೆ ಮುತ್ತೂರ ಗ್ರಾಮದ ಹಿರಿಯರಾದ ಭೀಮಪ್ಪ ಹಿಪ್ಪರಗಿ ಅವರು ಗೋವು ಪೂಜೆ ನೆರವೇರಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ಆಕಳು, ಎಮ್ಮೆ, ಆಡು, ನಾಯಿ ಸೇರಿದಂತೆ ವಿವಿಧ ಜಾನುವಾರುಗಳ ಆರೋಗ್ಯ ತಪಾಸಣೆ ಮಾಡಿ ಚುಚ್ಚುಮದ್ದು, ಮಾತ್ರೆ, ಓಷಧ ಮತ್ತು ಪೌಡರ ನೀಡಿ ಉಪಚಾರ ನೀಡಲಾಯಿತು. ಜಾನುವಾರುಗಳ ಮಾಲೀಕರಿಗೆ ಓಷಧ ಮತ್ತು ಮಾತ್ರೆಗಳನ್ನು ವಿತರಿಸಲಾಯಿತು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ.ಸಿ.ಎಸ್. ನಿಂಬಾಳ, ಮುಖ್ಯ ಪಶುವೈದ್ಯಾಧಿಕಾರಿ ಡಾ.ಆರ್.ಬಿ. ನಾಗರಳ್ಳಿ, ಮುತ್ತೂರಿನ ಪಶು ಚಿಕಿತ್ಸಾಲಯದ ಹಿರಿಯ ಪಶುವೈದ್ಯಾಧಿಕಾರಿ ಡಾ.ಯಲ್ಲಪ್ಪ ಅಥಣಿ, ಕಿರಿಯ ಪಶುವೈದ್ಯಕೀಯ ಪರೀವೀಕ್ಷಕ ಈಶ್ವರ ಅಸ್ಕಿ ಹಾಗೂ ಎನ್‌ಎಸ್‌ಎಸ್ ಶಿಬಿರಾರ್ಥಿಗಳು ಶಿಬಿರದ ಯಶಸ್ಸಿಗೆ ಶ್ರಮಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಡಾ.ತಿಪ್ಪೇಸ್ವಾಮಿ(ಘಟಕ-ಅ) ಹಾಗೂ ಡಾ.ವಿ.ಎಸ್. ಕುಲಕರ್ಣಿ (ಘಟಕ-ಬ) ಶಿಬಿರದ ಮೇಲುಸ್ತುವಾರಿ ವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 