ನೀರು ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರ ಪಾತ್ರ ಪ್ರಮುಖ

ನೀರು ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರ ಪಾತ್ರ ಪ್ರಮುಖ  NSS volunteers play a key role in raising awareness about water conservation

ಲೋಕದರ್ಶನ ವರದಿ 

ಬಾಗಲಕೋಟೆ 24: ನೀರನ್ನು ಉಳಿಸುವುದು ಎಂದರೆ ಭವಿಷ್ಯವನ್ನು ರಕ್ಷಿಸಿಕೊಂಡಂತೆ. ಎನ್‌ಎಸ್‌ಎಸ್ ಸ್ವಯಂಸೇವಕರು ಸಮಾಜ ಸೇವೆಯೊಂದಿಗೆ ಜಲ ಸಂರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಎಚ್‌. ಕಟಗೇರಿ ಹೇಳಿದರು.  

ನಗರದ ಬಿವಿವಿ ಸಂಘದ ಬಸವೇಶ್ವರ ಪದವಿ ಪೂರ್ವ ಕಲಾ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಘಟಕ 1 ಮತ್ತು 2ರ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನಾಚರಣೆ ಹಾಗೂ ಜಲ ಸಂರಕ್ಷಣೆಯಲ್ಲಿ ಯುವಕರ ಪಾತ್ರ ಕುರಿತ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  

ಪ್ರಾಚಾರ್ಯ ಎಸ್‌.ಆರ್‌. ಮೂಗನೂರಮಠ ಮಾತನಾಡಿ, ನೀರು ಜೀವಜಲವಾಗಿದ್ದು, ಅದನ್ನು ಉಳಿಸಿದರೆ ಮುಂದಿನ ಜೀವನ ಸರಾಗವಾಗುತ್ತದೆ. ಕಲುಷಿತ ನೀರನ್ನು ವ್ಯರ್ಥ ಮಾಡದೆ ಗಿಡಮರಗಳ ಬೆಳವಣಿಗೆಗೆ ಪುನರ್ಬಳಕೆ ಮಾಡಬೇಕು.

ಹರಿದುಹೋಗುವ ನೀರನ್ನು ತಡೆದು, ನಿಂತ ನೀರನ್ನು ಇಂಗಿಸುವ ಮೂಲಕ ಜಲ ಸಂರಕ್ಷಣೆಗೆ ಒತ್ತು ನೀಡಬೇಕು ಎಂದರು.  ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಘಟಕ-1ರ ಕಾರ್ಯಕ್ರಮಾಧಿಕಾರಿ ಡಾ. ಆರ್‌.ಆರ್‌. ಅರಸಿನಗೌಡ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.