ಬಳ್ಳಾರಿ:ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಇದೇ ಜು.27ರಂದು ಬೆಳಗ್ಗೆ 10.30ಕ್ಕೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಅಚ್ಚುಕಟ್ಟಾಗಿ ಆಚರಿಸಲು ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಅಪರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಯಂತಿಗೆ ಸಂಬಂಧಿಸಿದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಆಚರಿಸಲಾಗುತ್ತದೆ. ಜಯಂತಿಯ ಅಂಗವಾಗಿ ಅವರ ಸಾಧನೆಗಳನ್ನು ಯುವಜನರಿಗೆ ತಲುಪುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆತರಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಕುಡಿಯುವ ನೀರು ಮತ್ತು ಸ್ವಚ್ಚತೆಯನ್ನು ಕಾಪಾಡಲು ಪಾಲಿಕೆಯ ಅಧಿಕಾರಿಗಳಿಗೆ ಹಾಗೂ ಬಂದೋಬಸ್ತ್ಗಾಗಿ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಈ ಕಾರ್ಯಕ್ರಮಕ್ಕೆ ವಿವಿಧ ಸಂಘ-ಸಂಸ್ಥೆಗಳ ಪಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಸರಕಾರದ ಶಿಷ್ಠಾಚಾರದನ್ವಯ ಈ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳೊಬ್ಬರು ಅವರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಸುಗಮ ಸಂಗೀತ ಹಾಗೂ ಇನ್ನೀತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಅವರು ಸಭೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೆಶಕ ಬಿ.ನಾಗರಾಜ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು