ನಾಡಪ್ರಭು ಕೆಂಪೇಗೌಡ ದಕ್ಷ ಜನಪರ ಆಡಳಿತಗಾರ: ಶಾಸಕ ಓಲೇಕಾರ
ಹಾವೇರಿ27: ಜಾಗತೀಕ ಮನ್ನಣೆಪಡೆದಿರುವ ಬೆಂಗಳೂರು ನಗರದ ನಿಮರ್ಾತೃ ನಾಡಪ್ರಭು ಕೆಂಪೇಗೌಡರು ಅತ್ಯಂತ ದಕ್ಷ ಮತ್ತು ಜನಪರ ಆಡಳಿಗಾರರಾಗಿ ಈ ನಾಡಿಗೆ ಆದರ್ಶಪ್ರಾಯರಾಗಿದ್ದಾರೆ ಎಂದು ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರು ಓಲೇಕಾರ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ನಗರದ ರಾಚೋಟೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದರು.
ಕೆಂಪೇಗೌಡರು ಬೆಂಗಳೂರು ನಗರದ ನಿಮರ್ಾಣಕ್ಕಾಗಿ ಅಡಿಗಲ್ಲು ಹಾಕಿದರು. ಅವರ ದೂರದೃಷ್ಟಿತ್ವದಿಂದ ಈ ನಗರ ನಿಮರ್ಾಣಕ್ಕೆ ಮುಂದಾದರು. ಜಗತ್ತಿನ ಅತ್ಯಂತ ಪ್ರತಿಷ್ಠಿತ ನಗರವಾಗಿ ಇದೀಗ ಬೆಳೆದು ನಿಂತಿದೆ. ಅವರ ಆಡಳಿತ ಅವಧಿಯಲ್ಲಿ ನಿಮರ್ಾಣಮಾಡಿದ ಹಲವು ಬೃಹತ್ ಕೆರೆ-ಕಟ್ಟೆಗಳು ಇಂದಿಗೂ ಜೀವಸೆಲೆಯಾಗಿ ನಾಡಿಗೆ ಆಸರೆಯಾಗಿವೆ. ಅಲ್ಲದೆ ಉತ್ತಮ ರಸ್ತೆ ನಿಮರ್ಾಣ, ರಸ್ತೆ ಇಕ್ಕೆಡೆಯಲ್ಲೂ ಸಾಲುಮರಗಳನ್ನು ಬೆಳೆಸುವ ಅವರ ಪರಿಸರ ಕಾಳಜಿ ಎಲ್ಲರಿಗೂ ಮಾದರಿಯಾಗಿದೆ ಎಂದು ಬಣ್ಣಿಸಿದರು.
ಕೇವಲ ರಸ್ತೆ, ಕಟ್ಟಡ, ಕೆರೆ-ಕಟ್ಟೆಗಳಲ್ಲದೇ ಕಲೆ, ಸಾಹಿತ್ಯಕ್ಕೆ ಸದಾ ಪ್ರೋತ್ಸಾಹ ನೀಡುತ್ತಾ ಕನ್ನಡ ಸಾಹಿತ್ಯಿಕ, ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದ ಅಪರೂಪದ ವ್ಯಕ್ತಿತ್ವದ ನಾಡಪ್ರಭು ಕೆಂಪೇಗೌಡರ ಆಡಳಿತ ದಕ್ಷತೆ ಹಾಗೂ ಸಾಮಾಜಿಕ ಕಾರ್ಯಗಳು ಇಂದಿನ ಯುವ ಸಮೂಹಕ್ಕೆ ಆದರ್ಶ ಪ್ರಾಯವಾಗಿವೆ ಎಂದು ಹೇಳಿದರು.
ಕೆಂಪೇಗೌಡರ ಕುರಿತಂತೆ ಕಾಗಿನೆಲೆ ಅಭಿವೃದ್ಧಿ ಪ್ರಾಕಾರದ ಸಂಶೋಧಕ ಜಗನ್ನಾಥ ಆರ್.ಗೇಣ್ಣನವರ ವಿಶೇಷ ಉಪನ್ಯಾಸ ನೀಡಿದರು. ರಾಚೋಟೇಶ್ವರ ಕಾಲೇಜಿನ ನಿವೃತ್ತ ಪ್ರಾಚಾರ್ಯ ಎಸ್.ಬಿ.ಅಣ್ಣಿಗೇರಿ ಅವರು ಮಾತನಾಡಿದರು.
ಸಮಾರಂಭದಲ್ಲಿ ತಾಲೂಕು ಪಂಚಾಯತಿ ಸದಸ್ಯರಾದ ವಿರುಪಾಕ್ಷಪ್ಪ ಹುಲ್ಲೂರ, ಶಿವಲಿಂಗೇಶ್ವರ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಎಸ್.ಆರ್.ಹಳ್ಳಿಕೇರಿ, ಹಿರಿಯಪ್ಪ ಪೂಜಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕ ಆರ್.ವಿ.ಚಿನ್ನಿಕಟ್ಟಿ ಅವರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 