ನಾಡಪ್ರಭು ಕೆಂಪೇಗೌಡರು ಅಪ್ರತಿಮ ನಾಯಕ
Nadaprabhu Kempegowda is an unparalleled leader
ಹಾವೇರಿ 27 : ನಾಡಪ್ರಭು ಕೆಂಪೇಗೌಡರು ಅಪ್ರತಿಮ ನಾಯಕರು ಹಾಗೂ ಬೆಂಗಳೂರು ನಗರ ನಿರ್ಮಾಣಮಾಡಿದವರು ಎಂದು ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ಅವರು ಹೇಳಿದರು.
ಹಾವೇರಿ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡಿ ಅವರು ಮಾತನಾಡಿದರು.
ನೂರಾರು ಕೆರೆಗಳನ್ನು ಹಾಗೂ ಹಲವಾರು ದೇವಸ್ಥಾನಗಳನ್ನು ಕಟ್ಟಿಸಿದ್ದರು. ಅವರು ಉತ್ತಮ ಆಡಳಿತಗಾರರಾಗಿದ್ದರು. ವಿದ್ಯಾರ್ಥಿಗಳು ಇಂತಹ ಮಹಾನ್ ನಾಯಕರ ಇತಿಹಾಸವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾರುತಿ ಶಿಡ್ಲಾಪೂರ ಅವರು ಕೆಂಪೇಗೌಡರ ಜೀವನದ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ.ಮೈದೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ಉಪ ತಹಶೀಲ್ದಾರ ಅಮೃತಗೌಡ ಪಾಟೀಲ, ಪಿ.ಎಸ್. ಡಂಬಳ್ಳಿ, ಆರ್.ಕೆ.ರಾಜಾನಾಯ್ಕ ಇತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 