ಕಲಬುರಗಿ, ಫೆ 3 : ನಗರದಲ್ಲಿ ಫೆ 5 ರಿಂದ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು ಹಾಗೂ ವಿಶ್ವವಿದ್ಯಾನಿಲಯಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಬಿ. ಶರತ್ ಆದೇಶಿಸಿದ್ದಾರೆ.
ಇದೇ ತಿಂಗಳ 5, 6 ಮತ್ತು 7 ರಂದು ಮೂರು ದಿನಗಳ ಕಾಲ ಗುಲ್ಬರ್ಗ ವಿವಿ ಆವರಣದಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ನಡೆಯುತ್ತಿದೆ. ಸಾಹಿತ್ಯೆ ಜಾತ್ರೆ ಸಂದರ್ಭದಲ್ಲಿ ಎಲ್ಲಾ ಶಾಲಾ-ಕಾಲೇಜು ಹಾಗೂ ವಿಶ್ವವಿದ್ಯಾಲಯದ ಉಪನ್ಯಾಸಕರು, ಶಿಕ್ಷಕರು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ಅಂತೆಯೇ ಶಾಲಾ ವಾಹನಗಳನ್ನು ಸಾರಿಗೆ ಸೌಲಭ್ಯಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದರು.
ಸಮ್ಮೇಳನಕ್ಕೆ ಆಗಮಿಸುತ್ತಿರುವ ಪ್ರತಿನಿಧಿಗಳಿಗಾಗಿ ಶಾಲಾ-ಕಾಲೇಜುಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಅದರ ಜೊತೆಗೆ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಪಾಲ್ಗೊಂಡು ಸಮ್ಮೇಳನವನ್ನು ಕಣ್ತುಂಬಿಕೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.