ಕಾನೂನು ಮಹಾವಿದ್ಯಾಲಯದ ಪ್ರತಿಭಾ ಪುರಸ್ಕಾರದಲ್ಲಿ ನಾಗಶ್ರೀ ನಂದಗಾವಿಗೆ ಚಿನ್ನದ ಪದಕ
Nagashree Nandgawi wins gold medal at Law College's Pratibha Puraskar
ಬೆಳಗಾವಿ 23: ನಗರದ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ 2025ಹಿ26್ಫೂ ಶೈಕ್ಷಣಿಕ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಜಿಮಖಾನಾ ಸಮಾರೋಪ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನಡೆಸಿದ ಭಾರತೀಯ ಸಂವಿಧಾನ ವಿಷಯದಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿನಿ ನಾಗಶ್ರೀ ನಂದಗಾವಿ ಅವರಿಗೆ ಭಾರತದ ಮಾಜಿ ಅಟಾರ್ನಿ ಜನರಲ್ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಕೆ.ಕೆ. ವೇಣುಗೋಪಾಲ್ ಪ್ರಾಯೋಜಿತ ಎಂ.ಕೆ. ನಂಬಿಯಾರ್ ಚಿನ್ನದ ಪದಕವನ್ನು ಪ್ರದಾನಿಸಲಾಯಿತು. ಕಳೆದ 33 ವರ್ಷಗಳಿಂದ ಈ ಪ್ರತಿಷ್ಠಿತ ಚಿನ್ನದ ಪದಕವನ್ನು ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.
ಭಾರತೀಯ ಸೇನೆಯ ನಿಯೋಜಿತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪಂಕಜಾ ಎ. ಕುಗಜಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಭಾರತೀಯ ಸೇನೆಯ ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಯ ಕುರಿತು ವಿವರಿಸಿದ ಅವರು, ಮೇಜರ್ ಜನರಲ್ ನೇತೃತ್ವದಲ್ಲಿ ಕಾರ್ಯನಿರ್ವಹಿಸುವ ಈ ವಿಭಾಗವು ಸೇನಾ ಅಧಿಕಾರಿಗಳಿಗೆ ಕಾನೂನು ಸಲಹೆ ನೀಡುವುದು, ಕೋರ್ಟ್ ಮಾರ್ಷಲ್ ಪ್ರಕ್ರಿಯೆಗಳನ್ನು ನಡೆಸುವುದು, ಸೇನಾ ಕಾನೂನುಗಳ ವ್ಯಾಖ್ಯಾನ ಮಾಡುವುದು ಹಾಗೂ ನ್ಯಾಯಮಂಡಳಿ ಮತ್ತು ನಾಗರಿಕ ನ್ಯಾಯಾಲಯಗಳಲ್ಲಿ ಸಶಸ್ತ್ರ ಪಡೆಗಳನ್ನು ಪ್ರತಿನಿಧಿಸುವಂತಹ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸುತ್ತದೆ ಎಂದು ತಿಳಿಸಿದರು.
ಕಾನೂನು ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನವನ್ನು ಕಟ್ಟಿಕೊಳ್ಳುವುದರ ಜೊತೆಗೆ ರಾಷ್ಟ್ರ ನಿರ್ಮಾಣದಲ್ಲಿಯೂ ಪ್ರಮುಖ ಪಾತ್ರವಹಿಸುತ್ತಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಹಿರಿಯ ನ್ಯಾಯವಾದಿ ಆರ್.ಎಸ್. ಮುತಾಲಿಕ್ ಅವರು, 1939 ರಲ್ಲಿ ಸ್ಥಾಪನೆಯಾದ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಸುದೀರ್ಘ ಪರಂಪರೆ ಹಾಗೂ ವಕೀಲಿಕೆ, ನ್ಯಾಯಾಂಗ, ರಾಜಕೀಯ ಮತ್ತು ಸಾರ್ವಜನಿಕ ಸೇವಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಹಳೆಯ ವಿದ್ಯಾರ್ಥಿಗಳ ಕೊಡುಗೆಗಳನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಸುಮಾರು 40 ದತ್ತಿ ಪ್ರಶಸ್ತಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು. ಜಿಮಖಾನಾ ಒಕ್ಕೂಟದ ಅಧ್ಯಕ್ಷ ಡಾ. ಡಿ. ಪ್ರಸನ್ನಕುಮಾರ ಸ್ವಾಗತಿಸಿದರು. ಮಹಾವಿದ್ಯಾಲಯದ ಜಿಮಖಾನಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ತನ್ಮಯಿ ಸಾರಾಫ್ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಮಹಿಳಾ ಪ್ರತಿನಿಧಿ ಚಂದ್ರಲೇಖಾ ಪಾಟೀಲ ವಂದಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎ.ಎಚ್. ಹಾವಳದಾರ, ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕ ಅಮಿತ್ ಜಾಧವ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 