ನಾಗೇಶ್ ಜೆ. ನಾಯಕ ಅವರಿಗೆ ರಾಜ್ಯಮಟ್ಟದ ಅಪ್ಪ ಪ್ರಶಸ್ತಿ
Nagesh J. Nayak gets state-level Dad Award
ಸವದತ್ತಿ 21: ಪಟ್ಟಣದ ಶಿವಬಸವ ನಗರದ ಶಿಕ್ಷಕ, ಕವಿ, ವಿಮರ್ಶಕ ನಾಗೇಶ್ ಜೆ. ನಾಯಕ ಅವರಿಗೆ ರಾಜ್ಯಮಟ್ಟದ ‘ಅಪ್ಪ’ ಪ್ರಶಸ್ತಿ ಲಭಿಸಿದೆ. ಯಾದಗಿರಿ ಜಿಲ್ಲೆಯ ಶಹಾಪೂರಿನ ದಿ. ಶ್ರೀ ಯಂಕೋಬ ದೊರೆ ಸ್ಮರಣಾರ್ಥ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನಾಡಿನ ಸಾಧಕರಿಗೆ ಕೊಡಮಾಡುವ ಪ್ರಶಸ್ತಿ ಇದಾಗಿದ್ದು, ನಾಗೇಶ್ ಜೆ. ನಾಯಕ ಅವರ ಸಾಹಿತ್ಯಿಕ ಸಾಧನೆಗೆ ಈ ಗೌರವ ಪುರಸ್ಕಾರ ಲಭಿಸಿದೆ. ದಿನಾಂಕ 26 ರಂದು ಶಹಾಪೂರಿನಲ್ಲಿ ನಡೆಯುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾಗಿರುವ ಶರಣಬಸಪ್ಪಗೌಡ ದರ್ಶನಾಪೂರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಳೆದ 25 ವರ್ಷಗಳಿಂದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಬರವಣಿಗೆ ಮಾಡುತ್ತಿರುವ ನಾಗೇಶ್ ನಾಯಕ 27 ಕೃತಿಗಳನ್ನು ರಚಿಸಿದ್ದಾರೆ. ದಸರಾ ಉತ್ಸವ, ರನ್ನ ಉತ್ಸವ, ಕಿತ್ತೂರು ಉತ್ಸವ, ಹಂಪಿ ಉತ್ಸವ, ಇಟಗಿ ಉತ್ಸವ, ಅಖಿಲ ಭಾರತ ಸಾಹಿತ್ಯ ಸಮ್ಮೇಳನ, ಆಳ್ವಾಸ್ ನುಡಿಸಿರಿ ಸಮ್ಮೇಳನ, ದೂರದರ್ಶನ, ರೇಡಿಯೋ ಕಾರ್ಯಕ್ರಮ ಸೇರಿದಂತೆ ನಾಡಿನ ಅನೇಕ ಕಡೆಗಳಲ್ಲಿ ಕವಿತೆ ವಾಚನ ಮಾಡಿದ್ದಾರೆ. ನಾಡಿನ ಪ್ರತಿಷ್ಠಿತ ಅಮ್ಮ ಪ್ರಶಸ್ತಿ ಸೇರಿದಂತೆ ಅನೇಕ ಪುಸ್ತಕ ಬಹುಮಾನ, ಗೌರವ ಪುರಸ್ಕಾರಗಳು ಇವರಿಗೆ ಸಂದಿವೆ. ಚಂದನ ಟಿ.ವಿ.ಯ ಬೆಳಗು, ಶುಭೋದಯ ಕಾರ್ಯಕ್ರಮದ ನೇರ ಸಂದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಸತತ ನಾಲ್ಕು ವರ್ಷಗಳಿಂದ ಉದಯಕಾಲ ಪತ್ರಿಕೆಯಲ್ಲಿ ಇವರ ‘ಕಾಡುವ ಕವಿತೆ’ ಎಂಬ ಅಂಕಣ ಪ್ರಕಟವಾಗುತ್ತಿದ್ದು ಓದುಗರ ಮೆಚ್ಚುಗೆ ಗಳಿಸಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 