ನಾಗೇಶ್ ಜೆ. ನಾಯಕ ಅವರಿಗೆ ಮೌಲ್ಯ ಸಾಹಿತ್ಯ ಸಮ್ಮಾನ ಪ್ರಶಸ್ತಿ
Nagesh J. Nayak receives the Valua Sahitya Sammana Award
ಲೋಕದರ್ಶನ ವರದಿ
ಸವದತ್ತಿ 19: ಪಟ್ಟಣದ ಶಿವಬಸವ ನಗರದ ಶಿಕ್ಷಕ, ಕವಿ, ವಿಮರ್ಶಕ ನಾಗೇಶ್ ಜೆ. ನಾಯಕ ಅವರಿಗೆ ರಾಜ್ಯಮಟ್ಟದ ‘ಮೌಲ್ಯ ಸಾಹಿತ್ಯ ಸಮ್ಮಾನ’ ಪ್ರಶಸ್ತಿ ಲಭಿಸಿದೆ. ರಾಮದುರ್ಗದ ಸಾಮಾಜಿಕ ಸೇವಾ ಪ್ರತಿಷ್ಠಾನವು ಮೌಲ್ಯಸಂಪದ ವಾರಪತ್ರಿಕೆಯ 21 ನೇ ವಾರ್ಷಿಕೋತ್ಸವದ ಅಂಗವಾಗಿ ನಾಡಿನ ಸಾಧಕರಿಗೆ ಕೊಡಮಾಡುವ ಪ್ರಶಸ್ತಿ ಇದಾಗಿದ್ದು, ನಾಗೇಶ್ ಜೆ. ನಾಯಕ ಅವರ ಸಾಹಿತ್ಯಿಕ ಸಾಧನೆಗೆ ಈ ಗೌರವ ಪುರಸ್ಕಾರ ಲಭಿಸಿದೆ. ದಿನಾಂಕ 24 ರಂದು ಸವದತ್ತಿಯ ಶಿರಸಂಗಿ ವೇದಮಾತಾ ಗಾಯತ್ರಿ ಸಂಸ್ಕೃತ ಗುರುಕುಲ ಕಲ್ಯಾಣ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ರಾಮದುರ್ಗದ ಶಾಸಕರಾದ ಅಶೋಕ ಪಟ್ಟಣ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಳೆದ 25 ವರ್ಷಗಳಿಂದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಬರವಣಿಗೆ ಮಾಡುತ್ತಿರುವ ನಾಗೇಶ್ ನಾಯಕ 27 ಕೃತಿಗಳನ್ನು ರಚಿಸಿದ್ದಾರೆ. ಸಹೃದಯ ಸಾಹಿತ್ಯ ಪ್ರತಿಷ್ಠಾನ ಸ್ಥಾಪಿಸಿ ಅತ್ಯುತ್ತಮ ಕವನ ಸಂಕಲನಗಳಿಗೆ ರಾಜ್ಯಮಟ್ಟದ ‘ಸಹೃದಯ ಕಾವ್ಯ ಪ್ರಶಸ್ತಿ’ ಯನ್ನು ಕೊಡಮಾಡುತ್ತಿದ್ದಾರೆ. ದಸರಾ ಉತ್ಸವ, ರನ್ನ ಉತ್ಸವ, ಕಿತ್ತೂರು ಉತ್ಸವ, ಹಂಪಿ ಉತ್ಸವ, ಇಟಗಿ ಉತ್ಸವ, ಅಖಿಲ ಭಾರತ ಸಾಹಿತ್ಯ ಸಮ್ಮೇಳನ, ಆಳ್ವಾಸ್ ನುಡಿಸಿರಿ ಸಮ್ಮೇಳನ, ದೂರದರ್ಶನ, ರೇಡಿಯೋ ಕಾರ್ಯಕ್ರಮ ಸೇರಿದಂತೆ ನಾಡಿನ ಅನೇಕ ಕಡೆಗಳಲ್ಲಿ ಕವಿತೆ ವಾಚನ ಮಾಡಿದ್ದಾರೆ.
ನಾಡಿನ ಪ್ರತಿಷ್ಠಿತ ಅಮ್ಮ ಪ್ರಶಸ್ತಿ, ಸಂಚಯ ಕಾವ್ಯ ಪುರಸ್ಕಾರ, ಸಂಕ್ರಮಣ ಕಾವ್ಯ ಪ್ರಶಸ್ತಿ, ಆಜೂರು ಪುಸ್ತಕ ಪ್ರಶಸ್ತಿ, ಕಸಾಪ ದತ್ತಿ ಪ್ರಶಸ್ತಿ, ಇಂಚಲ ಕಾವ್ಯ ಪ್ರಶಸ್ತಿ, ಅಡ್ವೈಸರ್ ಪ್ರಶಸ್ತಿ, ದಸಾಪ ಪುಸ್ತಕ ಪ್ರಶಸ್ತಿ, ಸಿರಿಗನ್ನಡ ಪುಸ್ತಕ ಪ್ರಶಸ್ತಿ, ಬೆಳ್ಳಿ ಸಂಭ್ರಮ ಗಜಲ್ ಕಾವ್ಯ ಪ್ರಶಸ್ತಿ, ತಾಲೂಕಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸೇರಿದಂತೆ ಅನೇಕ ಪುಸ್ತಕ ಬಹುಮಾನ, ಗೌರವ ಪುರಸ್ಕಾರಗಳು ಇವರಿಗೆ ಸಂದಿವೆ. ಚಂದನ ಟಿ.ವಿ.ಯ ಬೆಳಗು, ಶುಭೋದಯ ಕಾರ್ಯಕ್ರಮದ ನೇರ ಸಂದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಸತತ ನಾಲ್ಕು ವರ್ಷಗಳಿಂದ ಉದಯಕಾಲ ಪತ್ರಿಕೆಯಲ್ಲಿ ಇವರ ‘ಕಾಡುವ ಕವಿತೆ’ ಎಂಬ ಅಂಕಣ ಪ್ರಕಟವಾಗುತ್ತಿದ್ದು ಓದುಗರ ಮೆಚ್ಚುಗೆ ಗಳಿಸಿದೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 