370ನೇ ವಿಧಿ ರದ್ದು ಸಮರ್ಥಿಸಿಕೊಂಡ ನಾಯ್ಡು, ಅಮಿತ್ ಶಾ
ಚೆನ್ನೈ, ಆಗಸ್ಟ್ 11 ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿರುವುದನ್ನು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಮರ್ಥಿಸಿಕೊಂಡಿದ್ದಾರೆ. ವೆಂಕಯ್ಯ ನಾಯ್ಡು ಅವರ ಪುಸ್ತಕ ಬಿಡುಗಡೆಯಲ್ಲಿ ಮಾತನಾಡಿದ ಅಮಿತ್ ಶಾ, ಕೇಂದ್ರದ ಈ ನಡೆಯಿಂದ ದೇಶಕ್ಕೆ ಒಳಿತಾಗಲಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದರು. ದೇಶದ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಈ ವಿಧೇಯಕ ರದ್ದುಗೊಳಿಸುವ ಅಗತ್ಯವಿತ್ತು ಎಂದು ವೆಂಕಯ್ಯ ನಾಯ್ಡು ತಿಳಿಸಿದರು. ಸಮಸ್ಯೆಯನ್ನು ರಾಷ್ಟ್ರೀಯ ದೃಷ್ಟಿಕೋನದಿಂದಲೂ ನೋಡಬೇಕು. ದೇಶದ ಜನ, ಜಮ್ಮು ಮತ್ತು ಕಾಶ್ಮೀರದವರ ಜೊತೆ ನಿಲ್ಲಬೇಕು ಎಂದು ನಾಯ್ಡು ಕರೆ ನೀಡಿದರು. ರಾಜ್ಯದಲ್ಲಿ ಮಸೂದೆ ಅಂಗೀಕಾರಕ್ಕಾಗಿ ನಾಯ್ಡು ಅವರಿಗೆ ಧನ್ಯವಾದ ಅರ್ಪಿಸಿದ ಅಮಿತ್ ಶಾ, 370ನೇ ವಿಧಿ ರದ್ದುಗೊಳಿಸಿದ್ದು, ಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆಗೊಳ್ಳುತ್ತದೆ ಮತ್ತು ಕಾಶ್ಮೀರದ ಪ್ರಗತಿ ಮತ್ತು ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 