ಆಯನೂರಿನ ಮಸೀದಿಯಲ್ಲಿ ನಮಾಜ್: ಏಳು ಮಂದಿಗೆ ಜ್ವರ ಪತ್ತೆ
ಶಿವಮೊಗ್ಗ, ಏ 3,ಲಾಕ್‌ಡೌನ್ ಮತ್ತು ನಿಷೇಧಾಜ್ಞೆ ಆದೇಶ ಉಲ್ಲಂಘಿಸಿ ಮಸೀದಿಯೊಂದರಲ್ಲಿ ಜಮಾಜ್‌ಗೆ ಒಟ್ಟು ಸೇರಿದ್ದ 77 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು, ಕ್ವಾರಂಟೈನ್’ನಲ್ಲಿ ಇರಿಸಿದ್ದಾರೆ. ನಮಾಜ್’ನಲ್ಲಿ ಭಾಗಿಯಾದವರ ಪೈಕಿ ಏಳು ಮಂದಿಯಲ್ಲಿ ಜ್ವರದ ಲಕ್ಷಣ ಇರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ ಆಯನೂರು ಸಮೀಪದ ಕೆಸವಿನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರದ ನಮಾಜ್ ಮಾಡಲು 70ಕ್ಕೂ ಹೆಚ್ಚು ಮಂದಿ ಸೇರಿದ್ದಾರೆ ಎಂಬುದಾಗಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.ಏಳು ಮಂದಿಯನ್ನು ಕೂಡಲೆ ಆಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಉಳಿದ 70 ಮಂದಿಯನ್ನು ಸಮೀಪದ ಶಾಲೆಯೊಂದರ ಕಟ್ಟಡದಲ್ಲಿ ಕ್ವಾರಂಟೈನ್ ವಿಭಾಗದಲ್ಲಿ ಇರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಕುಂಸಿ ಠಾಣೆ ಸಬ್ ಇನ್ಸ್‌ಪೆಕ್ಟರ್ ನವೀನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 